ಹತ್ರಾಸ್ ಜಿಲ್ಲೆಯಲ್ಲಿ ಧಾರ್ಮಿಕ ಕಾರ್ಯಕ್ರಮವೊಂದರಲ್ಲಿ ಕಾಲ್ತುಳಿತದಿಂದಾಗಿ ನೂರಾರು ಮಂದಿ ದುರಂತ ಸಾವಿಗೀಡಾಗಿರುವ ಘಟನೆ ನಡೆದಿದೆ. ನೂರಕ್ಕೂ ಅಧಿಕ ಜನರು ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ. ಆದರೆ, ಆಸ್ಪತ್ರೆಯಲ್ಲಿ ಹೆಣಗಳ ರಾಶಿ ಕಂಡು ಪೊಲೀಸ್ ಕಾನ್ ಸ್ಟೇಬಲ್ ವೊಬ್ಬರು ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಇಟಾಹ್ ಜಿಲ್ಲೆಯ ಅವಘರ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯದಲ್ಲಿದ್ದ ಕಾನ್‌ಸ್ಟೆಬಲ್ ರವಿ, ಹತ್ರಾಸ್ (Hathras) ಸತ್ಸಂಗದಲ್ಲಿ ಸಾವನ್ನಪ್ಪಿದವರ ಮೃತದೇಹಗಳನ್ನು ನೋಡಿದ ಕೂಡಲೇ ಹೃದಯಾಘಾತಕ್ಕೆ ಒಳಗಾಗಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ, ಅವರು ಇಟಾಹ್ ವೈದ್ಯಕೀಯ ಕಾಲೇಜಿನಲ್ಲಿ ನಿಧನರಾದರು.
ರವಿಯನ್ನು ಹತ್ರಾಸ್ ಘಟನೆ ನಡೆಯುತ್ತಿದ್ದಂತೆ ಇಟಾಹ್ ವೈದ್ಯಕೀಯ ಕಾಲೇಜಿಗೆ ಹೋಗುವಂತೆ ಅವರಿಗೆ ಸೂಚಿಸಲಾಗಿತ್ತು. ಅಲ್ಲಿಗೆ ಬಂದಿದ್ದ ಕಾನ್‌ಸ್ಟೇಬಲ್ ರವಿಗೆ ಮೃತದೇಹಗಳನ್ನು ಕಂಡು ತಲೆ ತಿರುಗಿ ಬಿದ್ದಿದ್ದರು.
ಮೈಬಿಸಿ ಕಾರಣ ರವಿ ತನ್ನ ಶರ್ಟ್ ತೆಗೆದು ಹಾಕಿದರು. ತಕ್ಷಣ ಅಧಿಕಾರಿಗಳು ಹವಾನಿಯಂತ್ರಿತ ಕೋಣೆಗೆ ಅವರನ್ನು ಸ್ಥಳಾಂತರಿಸಿದ್ದರು. ಆದರೆ, ಅವರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ ಎಂದು ವರದಿ ಹೇಳಿವೆ. ಹತ್ರಾಸ್ ಕಾಲ್ತುಳಿತದಿಂದ ಇಲ್ಲಿಯವರೆಗೆ 116 ಜನ ಬಲಿಯಾಗಿದ್ದಾರೆ. ಈ ಪೈಕಿ ಮಹಿಳೆಯರೇ ಹೆಚ್ಚಿನ ಸಂಖ್ಯೆಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.