ಹಾಲು ಹಾಗೂ ಬಸ್ ದರ ಏರಿಕೆಯ ಬೆನ್ನಲ್ಲೇ ರಾಜ್ಯ ಸರ್ಕಾರ ಗೃಹ ಜ್ಯೋತಿ ಯೋಜನೆಯ ಪರಿಷ್ಕರಣೆ ಹೆಸರಿನಲ್ಲಿ ಸಾರ್ವಜನಿಕರಿಗೆ ಕರೆಂಟ್ ಶಾಕ್ ನೀಡಲು ಸಿದ್ಧತೆ ನಡೆಸಿದೆ.
ರಾಜ್ಯದ ಐದು ಎಸ್ಕಾಂಗಳ ವ್ಯಾಪ್ತಿಯಲ್ಲಿ ನಡೆಸಲಾಗಿದ್ದ ಮನೆ ಮನೆ ಸರ್ವೆ ಕಾರ್ಯ ಅಕ್ಟೋಬರ್ 31ಕ್ಕೆ ಪೂರ್ಣಗೊಂಡಿದ್ದು, ಇಂಧನ ಇಲಾಖೆಯು ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಸಜ್ಜಾಗಿದೆ. ರಾಜ್ಯದಲ್ಲಿ ಪ್ರಸ್ತುತ 1.64 ಕೋಟಿ ಫಲಾನುಭವಿಗಳಿದ್ದು, ಬೆಸ್ಕಾಂ ವ್ಯಾಪ್ತಿಯಲ್ಲೇ 68 ಲಕ್ಷ ಜನರಿದ್ದಾರೆ.


















