ಕೇರಳದ ವಯಾನಾಡ್ ಲೋಕಸಭಾ ಕ್ಷೇತ್ರಕ್ಕೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಭರ್ಜರಿ ಜಯ ಸಾಧಿಸಿದ್ದು, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ಸಿಹಿ ತಿನ್ನಿಸಿ ಅಭಿನಂದಿಸಿದ್ದಾರೆ.
ದೆಹಲಿಯ ಕಚೇರಿಯಲ್ಲಿ ಪ್ರಿಯಾಂಕಾ ಗಾಂಧಿ ಅವರಿಗೆ ಖರ್ಗೆ ಸಿಹಿ ತಿನ್ನಿಸಿ, ಶಾಲು ಹೊದಿಸಿ ಅಭಿನಂದಿಸಿದ್ದಾರೆ. ಪ್ರಿಯಾಂಕಾ ಗಾಂಧಿ ಅವರು 4.10 ಲಕ್ಷಕ್ಕೂ ಅಧಿಕ ಮತಗಳ ಅಂತರದಿಂದ ದಾಖಲೆಯ ಜಯ ಸಾಧಿಸಿದ್ದಾರೆ. ಹೀಗಾಗಿ ಅವರು ಕ್ಷೇತ್ರದ ಮತದಾರರಿಗೆ ಧನ್ಯವಾದ ಅರ್ಪಿಸಿದ್ದಾರೆ.
ವಯನಾಡ್ ಜನರು ನನ್ನನ್ನು ಗೆಲ್ಲಿಸಿದ ರೀತಿಗೆ ಧನ್ಯವಾದ ಹೇಳಲು ಬಯಸುತ್ತೇನೆ. ನೀವೆಲ್ಲ ಸಾಕಷ್ಟು ಪ್ರೀತಿಯನ್ನು ನೀಡಿದ್ದೀರಿ. ನನ್ನ ಜವಾಬ್ದಾರಿಯನ್ನು ಸಂಪೂರ್ಣವಾಗಿ ನಿಭಾಯಿಸುತ್ತೇನೆ ಎಂದು ಅವರಿಗೆ ಭರವಸೆ ನೀಡಲು ಬಯಸುತ್ತೇನೆ. ನಾನು ನಿಮ್ಮ ಧ್ವನಿಯಾಗುತ್ತೇನೆ ಮತ್ತು ನಿಮಗಾಗಿ ಹೋರಾಡುತ್ತೇನೆ ಎಂದು ಭರವಸೆ ನೀಡಿದ್ದಾರೆ.
ವಯನಾಡ್‌ನಲ್ಲಿ 4 ಲಕ್ಷಕ್ಕಿಂತ ಅಧಿಕ ಮತಗಳ ಅಂತರದಿಂದ ಜಯಗಳಿಸಿರುವ ಪ್ರಿಯಾಂಕ ಗಾಂಧಿಯವರಿಗೆ ಮತ್ತು ಕೇರಳ ಜನತೆಗೆ ಸಿಎಂ ಸಿದ್ದರಾಮಯ್ಯ ಅಭಿನಂದನೆ ಸಲ್ಲಿಸಿದ್ದಾರೆ. ಜನರಿಗಾಗಿ ದುಡಿಯುವ ನಮ್ಮ ಸಂಕಲ್ಪಕ್ಕೆ ಚುನಾವಣಾ ಫಲಿತಾಂಶ ಇನ್ನಷ್ಟು ಬಲ ತುಂಬಿದೆ. ತಮ್ಮೆಲ್ಲರಿಗೂ ಮತ್ತೊಮ್ಮೆ ಧನ್ಯವಾದಗಳು ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಡಿಸಿಎಂ ಡಿ.ಕೆ.ಶಿವಕುಮಾರ್ ಕೂಡ ಪ್ರಿಯಾಂಕಾ ಗಾಂಧಿ ಅವರನ್ನು ಅಭಿನಂದಿಸಿದ್ದಾರೆ.