ಬೆಂಗಳೂರು: ಹೋಳಿ ಆಚರಣೆ ಸಂದರ್ಭದಲ್ಲಿ ಯುವಕರ ಗುಂಪಿನ ಮಧ್ಯೆ ಹೊಡೆದಾಟ ವೇಳೆ ಯುವಕರ ಮಧ್ಯೆ ಹೊಡೆದಾಟ ನಡೆದಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹೋಳಿ ಬಣ್ಣ ಎರಚಿಕೊಂಡು ಆಟವಾಡುವಾಗ ಲಾಲ್ ಬಾಗ್ ಒಳಗೆ ಈ ಗಲಾಟೆ ನಡೆದಿದೆ. ಸಿದ್ಧಾಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಪೈಪ್ ಗಳಿಂದ ಯುವಕರ ಗುಂಪು ಪರಸ್ಪರ ಹಲ್ಲೆ ನಡೆಸಿಕೊಂಡಿದ್ದಾರೆ. ಈಗ ಯುವಕರು ಹೊಡೆದಾಡಿಕೊಂಡಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಸಿದ್ದಾಪುರ ಪೊಲೀಸರು ವಿಡಿಯೋ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.