ಮುಂಬೈ: ಇಹಲೋಕ ತ್ಯಜಿಸಿರುವ ಲಕ್ಷಾಂತರ ಜನರ ಉದ್ಯೋಗದಾತ ರತನ್ ಟಾಟಾ (Ratan Tata) ಅವರಿಗೆ ಅಂತಿಮ ನಮನ ಸಲ್ಲಿಸಲು ಜನ ಸಾಗರ ಹರಿದು ಬಂದಿತ್ತು. ಈ ವೇಳೆ ನೂಕು ನುಗ್ಗಲು ಉಂಟಾಗಿ ಪೊಲೀಸರು ಅನಿವಾರ್ಯವಾಗಿ ಲಾಠಿ ಚಾರ್ಜ್ ನಡೆಸಿರುವ ಘಟನೆ ನಡೆದಿದೆ.
ಮುಂಬೈನ ನ್ಯಾಷನಲ್ ಸೆಂಟರ್ ಫಾರ್ ಪರ್ಫಾರ್ಮಿಂಗ್ ಆರ್ಟ್ಸ್ (ಎನ್‌ಸಿಪಿಎ) ಹೊರಗೆ ರತನ್ ಟಾಟಾ ಅವರ ಪಾರ್ಥಿವ ಶರೀರವನ್ನು ಸಾರ್ವಜನಿಕರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಆದರೆ, ಈ ವೇಳೆ ಜನ ಹೆಚ್ಚಾದ ಹಿನ್ನೆಲೆಯಲ್ಲಿ ಜನರನ್ನು ನಿಯಂತ್ರಿಸಲು ಮುಂಬೈ ಪೊಲೀಸರು ಲಾಠಿ ಪ್ರಹಾರ ನಡೆಸಿದ್ದಾರೆ.
ಹಲವಾರು ಸರತಿ ಸಾಲಿನಲ್ಲಿ ನಿಂತು ಗೌರವ ಸಲ್ಲಿಸಿದರು. ದೇಶಾದ್ಯಂತದ ಹಲವಾರು ಪ್ರಮುಖ ವ್ಯಕ್ತಿಗಳು ಮತ್ತು ರಾಜಕಾರಣಿಗಳು ರತನ್ ಟಾಟಾ ಅವರಿಗೆ ಅಂತಿಮ ಶ್ರದ್ಧಾಂಜಲಿ ಸಲ್ಲಿಸಿದರು.