ಬೆಳಗಾವಿ : ರಾಜ್ಯದಲ್ಲಿ ಬಾಣಂತಿಯರ ಸಾವಿನ ಸರಣಿ ಮುಂದುವರೆದಿದ್ದು, ಮತ್ತೋರ್ವ ಬಾಣಂತಿ ಸಾವನ್ನಪ್ಪಿರುವ ಸಂಗತಿ ಬೆಳಕಿಗೆ ಬಂದಿದೆ.
ಇತ್ತೀಚೆಗಷ್ಟೇ ರಾಜ್ಯದಲ್ಲಿ ಬಾಣಂತಿಯರು ಹಾಗೂ ಗರ್ಭಿಣಿಯರ ಸಾವಿನ ವಿರುದ್ಧ ಆಕ್ರೋಶ ಕೇಳಿ ಬಂದಿದ್ದವು. ಈಗ ಮತ್ತೋರ್ವ ಬಾಣಂತಿ ಸಾವನ್ನಪ್ಪಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಸಾವನ್ನಪ್ಪಿದ್ದಾರೆಂದು ಕುಟುಂಬಸ್ಥರು ಆರೋಪಿಸಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಇಲ್ಲಿಯ ಬಿಮ್ಸ್ ನಲ್ಲಿ ಬಾಣಂತಿಯೊಬ್ಬರು ಸಾವನ್ನಪ್ಪಿದ್ದಾರೆ. ತಾಲೂಕಿನ ಕರಡಿಗುದ್ದಿ ಗ್ರಾಮದ ಗಂಗವ್ವ ಗೊಡಕುಂದ್ರಿ ಸಾವನ್ನಪ್ಪಿರುವ ಮಹಿಳೆ. ಗಂಗವ್ವ ಜ. 28 ರಂದು ಬಿಮ್ಸ್‌ಗೆ ದಾಖಲಾಗಿದ್ದರು. ಜ. 30ರಂದು ಹೆರಿಗೆಯಾಗಿತ್ತು. ಹೆರಿಗೆಯಾಗುತ್ತಿದ್ದಂತೆ ಗಂಗವ್ವ ಅವರ ಬಿಪಿ ಲೋ ಆಗಿದೆ. ಹೀಗಾಗಿ ಗಂಗವ್ವ ಆರೋಗ್ಯ ಸೀರಿಯಸ್ ಮಾಡಬೇಕು ಎಂದಿದ್ದಾರೆ. ಆದರೆ, ಅದಾಗಿ ಸ್ವಲ್ಪ ಹೊತ್ತಿನ ನಂತರ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ.
ವೈದ್ಯರ ನಿರ್ಲಕ್ಷ್ಯದಿಂದಾಗಿ ಬಾಣಂತಿ ಸಾವನ್ನಪ್ಪಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಕುಟುಂಬಸ್ಥರು ಆಸ್ಪತ್ರೆಯಲ್ಲಿ ಆಕ್ರೋಶ ವ್ಯಕ್ತಪಡಿಸುತ್ತಿದ್ದಂತೆ ಭಯದಿಂದ ವೈದ್ಯರು ಖಾಲಿ ಪೇಪರ್ ಮೇಲೆ ಸಹಿ ಮಾಡಿಸಿಕೊಂಡು ಮೃತದೇಹವನ್ನು ಕಳುಹಿಸಿ ಕೊಟ್ಟಿದ್ದಾರೆ ಎಂಬ ಆರೋಪ ಕೇಳಿ ಬಂದಿದೆ. ಈ ಕುರಿತು ಬೆಳಗಾವಿ ಎಪಿಎಂಸಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.