ಚಿಕ್ಕಮಗಳೂರು: ಮದುವೆಗೆ ಸರಿಯಾದ ಸಂಬಂಧ ಸಿಗುತ್ತಿಲ್ಲ ಎಂಬ ಕಾರಣಕ್ಕೆ ಯುವಕನೊಬ್ಬ ಮನನೊಂದು ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ನಡೆದಿದೆ.
ಮೃತನನ್ನು ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ನಿವಾಸಿ ಕುಮಾರ್ (26) ಯುವಕ ಎಂದು ಗುರುತಿಸಲಾಗಿದೆ. ಕುರಿಗಾಹಿಯಾಗಿದ್ದ ಈತ ಕಡೂರು ತಾಲೂಕಿನ ಬೋರಗಾನಹಳ್ಳಿ ಗ್ರಾಮದ ಬಳಿ ಕುರಿ ಮೇಯಿಸಲು ಬಂದಿದ್ದ ಎನ್ನಲಾಗಿದೆ.
ಕಳೆದ ಕೆಲವು ಸಮಯದಿಂದ ಕುಮಾರ್‌ಗೆ ಮದುವೆಗಾಗಿ ಹುಡುಗಿ ಹುಡುಕಲಾಗುತ್ತಿತ್ತು. ಆದರೆ ಎಲ್ಲಿಯೂ ಸಂಬಂಧ ಕೂಡಿ ಬರುತ್ತಿರಲಿಲ್ಲ. ಇದರಿಂದ ತೀವ್ರವಾಗಿ ಮನನೊಂದಿದ್ದ ಕುಮಾರ್ ಮಾನಸಿಕವಾಗಿ ಖಿನ್ನತೆಗೆ ಒಳಗಾಗಿದ್ದ ಎನ್ನಲಾಗಿದೆ. ಇದೇ ಬೇಸರದಲ್ಲಿ ಕುಡಿದ ಮತ್ತಿನಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಪ್ರಾಣ ಕಳೆದುಕೊಂಡಿದ್ದಾನೆ ಎಂದು ತಿಳಿದುಬಂದಿದೆ.
ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಭೇಟಿ ನೀಡಿದ ಪೊಲೀಸರು ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮುಂದಿನ ತನಿಖೆ ಕೈಗೊಳ್ಳಲಾಗಿದೆ.
ಇದನ್ನೂ ಓದಿ : ಹುಬ್ಬಳ್ಳಿ ಲವ್ ಜಿಹಾದ್ ಕೇಸ್ಗೆ ಟ್ವಿಸ್ಟ್.. ವಿಡಿಯೋ ಇರೋದು ನಿಜ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಆರೋಪಿ!



















