ಚಳ್ಳಕೆರೆ: ಹಾಡಹಗಲೇ ಮನೆಗೆ ನುಗ್ಗಿ ಮಹಿಳೆಯ ಮೇಲಿದ್ದ ಚಿನ್ನಾಭರಣ ದೋಚಿ ಖದೀಮರು ಪರಾರಿಯಾಗಿರುವ ಘಟನೆಯೊಂದು ನಡೆದಿದೆ.
ಈ ಘಟನೆ ಚಳ್ಳಕೆರೆ ನಗರದಲ್ಲಿ ನಡೆದಿದೆ. ಈ ಘಟನೆ ಚಳ್ಳಕೆರೆ ನಗರದ ವಾಸವಿ ಕಾಲೋನಿಯ ವೆಂಕಟಚಲಮ್ ಎಂಬುವವರ ಮನೆಯಲ್ಲಿ ನಡೆದಿದೆ. ಗೀತಲಕ್ಷ್ಮಿ ಎಂಬುವವರು ಮನೆಯಲ್ಲಿ ಒಬ್ಬರೇ ಇದ್ದಾಗ ಒಳ ನುಗ್ಗಿದ ಖದೀಮರು, ಹೆದರಿಸಿ 4 ಚಿನ್ನದ ಬಳೆ, ಒಂದು ಚಿನ್ನದ ಸರ ಕಿತ್ತು ಪರಾರಿಯಾಗಿದ್ದಾರೆ. ಮೂರು ಜನ ಖದೀಮರು ಒಳನುಗ್ಗಿ ಈ ಕೃತ್ಯ ಎಸಗಿದ್ದಾರೆ ಎನ್ನಲಾಗಿದೆ.
ಈ ಘಟನೆ ಕೇಳಿ ಪಟ್ಟಣದ ಜನ ಬೆಚ್ಚಿ ಬಿದ್ದಿದ್ದಾರೆ. ಪೋಲಿಸ್ ಗಸ್ತು ಹೆಚ್ಚಿಸುವಂತೆ ಸಾರ್ವಜನಿಕರು ಆಗ್ರಹಿಸಿದ್ದಾರೆ. ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ರಂಜಿತ್ ಕುಮಾರ್ ಬಂಡಾರ್, ಡಿವೈಎಸ್ಪಿ ರಾಜಣ್ಣ ಸೇರಿದಂತೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಳ್ಳಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ