ಬೆಂಗಳೂರು: ಬಹುಮಹಡಿ ಕಟ್ಟಡದಿಂದ ಬಿದ್ದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಅಕ್ಷಯ್ ರೆಡ್ಡಿ ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿ. ಅಕ್ಷಯ್, ನಾಲ್ಕನೇ ವರ್ಷದ ಏರೋಸ್ಪೇಸ್ ವಿದ್ಯಾರ್ಥಿಯಾಗಿದ್ದ. ಬಿಎಂಎಸ್ ಕಾಲೇಜು ಕಟ್ಟಡದಿಂದ ಬಿದ್ದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಅಕ್ಷಯ್ ಬಸವನ ಗುಡಿಯಲ್ಲಿರುವ ಬಿಎಂಎಸ್ ಕಾಲೇಜಿನಲ್ಲಿ ವ್ಯಾಸಾಂಗ ಮಾಡುತ್ತಿದ್ದ. ಕಾಲೇಜು ಆಡಳಿತ ಮಂಡಳಿಯ ಟಾರ್ಚರ್ ನಿಂದ ನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಘಟನ ಸ್ಥಳಕ್ಕೆ ಬಸವನಗುಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಅಕ್ಷಯ್ ರೆಡ್ಡಿ ಬೆಳಗ್ಗೆಯಿಂದ ಎಂದಿನಂತೆ ಕ್ಲಾಸ್ ಗೆ ಅಟೆಂಡ್ ಆಗಿದ್ದ. ಸಂಜೆ 4ಗಂಟೆ ವೇಳೆಗೆ ಎಕ್ಸಾಂ ವಿಚಾರವಾಗಿ ಮಾತುಕತೆ ಮುಗಿಸಿದ್ದ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

















