ವಿದ್ಯಾರ್ಥಿನಿಯೋರ್ವಳು ಶಾಲಾ ಶೌಚಾಲಯದಲ್ಲಿಯೇ ಮಗುವಿಗೆ ಜನ್ಮ ನೀಡಿರುವ ಆಘಾತಕಾರಿ ಘಟನೆಯೊಂದು ನಡೆದಿದೆ.
ಈ ಘಟನೆ ಆಂಧ್ರ ಪ್ರದೇಶದ ಕೋತಪಟ್ಟಣಂನಲ್ಲಿ ನಡೆದಿದೆ. ಆದರೆ, ನವಜಾತ ಶಿಶು ಹುಟ್ಟಿದ ಕೂಡಲೇ ಸಾವನ್ನಪ್ಪಿದೆ ಎಂದು ತಿಳಿದು ಬಂದಿದೆ. ಚೀಮಕುರ್ತಿ ಮಂಡಲದ ನಿವಾಸಿಯಾದ 16 ವರ್ಷದ ವಿದ್ಯಾರ್ಥಿಯು ಕೋತಪಟ್ಟಣಂನ ಕಸ್ತೂರಬಾ ಗಾಂಧಿ ಬಾಲಿಕಾ ವಿದ್ಯಾನಿಲಯದಲ್ಲಿ ಓದುತ್ತಿದ್ದಳು. ವಿದ್ಯಾರ್ಥಿನಿ ಪ್ರತಿಭಾವಂತೆಯಾಗಿದ್ದು, ಪ್ರತಿದಿನ ಶಾಲೆಗೆ ಬರುತ್ತಿದ್ದಳು ಎಂದು ಶಿಕ್ಷಕರು ಹೇಳಿದ್ದಾರೆ.
ಆದರೆ, ವಿದ್ಯಾರ್ಥಿನಿ ಶೌಚಾಲಯಕ್ಕೆ ಹೋಗಿದ್ದ ಸಂದರ್ಭದಲ್ಲಿ ಮಗುವಿಗೆ ಜನ್ಮ ನೀಡಿದ್ದಾಳೆ. ಆಕೆಗೆ ಹಲವಾರು ಗಂಟೆಗಳ ಕಾಲ ಹೆರಿಗೆ ನೋವು ಕಾಣಿಸಿಕೊಂಡರೂ ಯಾರಿಗೂ ತಿಳಿಸಿರಲಿಲ್ಲ. ವಿದ್ಯಾರ್ಥಿ ಗರ್ಭಿಣಿಯಾಗಿರುವ ವಿಚಾರ ಕೂಡ ಶಾಲಾ ಅಧಿಕಾರಿಗಳು ಹಾಗೂ ಶಿಕ್ಷಕರಿಗೆ ಗೊತ್ತಿರಲಿಲ್ಲ.
ವಿದ್ಯಾರ್ಥಿನಿಯು ಶೌಚಾಲಯಕ್ಕೆ ತೆರಳಿ ಎಷ್ಟ ಹೊತಾದರೂ ಮರಳಿ ಬಾರದಿರುವುದಕ್ಕೆ ಸಹಪಾಠಿಗಳು ಹಾಗೂ ಶಿಕ್ಷಕರು ಪರೀಕ್ಷಿಸಲು ಶೌಚಾಲಯಕ್ಕೆ ಹೋಗಿದ್ದಾರೆ. ಆದರೆ, ಅಲ್ಲಿ ಆ ವಿದ್ಯಾರ್ಥಿನಿ ರಕ್ತದ ಮೊಡವಿನಲ್ಲಿ ಬಿದ್ದಿದ್ದಾಳೆ. ಗಂಭೀರ ಸ್ಥಿತಿಯಲ್ಲಿದ್ದ ಆಕೆಯನ್ನು ಕೂಡಲೇ ಆಸ್ಪತ್ರಗೆ ದಾಖಲಿಸಲಾಗಿದೆ.
ಮಗು ಹುಟ್ಟಿದ ಕೂಡಲೇ ಸಾವನ್ನಪ್ಪಿದೆ. ಆದರೆ, ವಿದ್ಯಾರ್ಥಿನಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಈ ಕುರಿತು ತನಿಖೆ ನಡೆದಿದೆ.