ಕೋಲಾರ : SSLC ಪಾಸಾದ ಖುಷಿ ದುರ್ಘಟನೆಯಲ್ಲಿ ಅಂತ್ಯಗೊಂಡಿದ್ದು, ಈಜಲು ತೆರಳಿದ್ದ ವಿದ್ಯಾರ್ಥಿ ನೀರಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಸೊಣ್ಣವಾಡಿ ಗ್ರಾಮದಲ್ಲಿ ನಡೆದಿದೆ. ಕಿರಣ್ (15) ಮೃತ ವಿದ್ಯಾರ್ಥಿಯಾಗಿದ್ದು, ಸೊಣ್ಣವಾಡಿ ಗ್ರಾಮದ ನಿವಾಸಿಯಾಗಿದ್ದಾನೆ.
ಮುಳಬಾಗಿಲು ನಗರದಲ್ಲಿನ ಸರ್ಕಾರಿ ಶಾಲೆಯಲ್ಲಿ ಓದುತ್ತಿದ್ದ ಕಿರಣ್, SSLC ಫಲಿತಾಂಶ ಬಂದ ಖುಷಿಯಲ್ಲಿ ಮೂವರು ಸ್ನೇಹಿತರೊಂದಿಗೆ ಈಜಲು ತೆರಳಿದ್ದನು. ಈಜು ಬಾರದಿದ್ದರೂ ಬಾವಿಗೆ ದುಮುಕಿ ಈಜಾಡಲು ಯತ್ನಿಸಿದ ಕಿರಣ್, ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಮುಳಬಾಗಿಲು ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಅಂಡರ್-19 ಕೋಚ್ ಮೇಲೆ ಹಲ್ಲೆ, ಕೊಲೆ ಯತ್ನ ಆರೋಪ – ಮೂವರು ಪುದುಚೇರಿ ಕ್ರಿಕೆಟಿಗರ ಅಮಾನತು!


















