ತುಮಕೂರು : ಚಲಿಸುತ್ತಿದ್ದ KSRTC ಬಸ್ನ ಇಂಜಿನ್ನಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಬಳಿ ನಡೆದಿದೆ.
ಹುಳಿಯಾರಿನಿಂದ ಅರಸೀಕೆರೆಗೆ ತೆರಳುತ್ತಿದ್ದ ಬಸ್ನಲ್ಲಿ ಬೆಂಕಿ ಕಾಣಿಸಿಕೊಂಡ ಕೂಡಲೇ ಪ್ರಯಾಣಿಕರನ್ನು ಕೆಳೆಗೆ ಇಳಿಸಲಾಗಿದ್ದು, ಡೀಸೆಲ್ ಸೋರಿಕೆಯಾಗಿ ಬೆಂಕಿ ಕಾಣಿಸಿಕೊಂಡಿರುವ ಅನುಮಾನ ವ್ಯಕ್ತವಾಗಿದೆ.
ಕೂಡಲೇ ಎಚ್ಚೆತ್ತ ಸ್ಥಳೀಯರು ತಕ್ಷಣ ನೀರು ಹಾಕಿ ಬೆಂಕಿ ನಂದಿಸುವ ಕೆಲಸ ಮಾಡಿದ್ದಾರೆ. ಇದರಿಂದ ಹೆಚ್ಚಿನ ಅನಾಹುತ ತಪ್ಪಿದ್ದು, ಹುಳಿಯಾರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಇದನ್ನೂ ಓದಿ : ರಷ್ಯಾ, ಇರಾನ್ ತೈಲ ಆಮದಿನ ಮೇಲಿನ ನಿರ್ಬಂಧ ವಿನಾಯಿತಿ ರದ್ದುಗೊಳಿಸಿದ ಅಮೆರಿಕ : ಭಾರತಕ್ಕೆ ತಟ್ಟಲಿದೆಯೇ ಬಿಸಿ?


















