ಬೆಂಗಳೂರು ಗ್ರಾಮಾಂತರ : ಚಲಿಸುತ್ತಿದ್ದ ಲಾರಿಯಲ್ಲಿ ಏಕಾಏಕಿ ಬೆಂಕಿ ಕಾಣಿಸಿಕೊಂಡ ಘಟನೆ ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ ಚೊಕ್ಕನಹಳ್ಳಿ ಎನರ್ಜಿ ಇನ್ಸ್ಟಿಟ್ಯೂಟ್ ಮುಂಭಾಗದಲ್ಲಿ ನಡೆದಿದೆ.
ಚಾಲಕನ ಸಮಯ ಪ್ರಜ್ಣೆಯಿಂದ ಬೆಂಕಿ ಅವಾರಿಸಿಕೊಳ್ಳುತ್ತಿದ್ದಂತೆ ಚಾಲಕ ರಸ್ತೆಗಿಳಿದಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಬೆಂಕಿ ಹತ್ತಿಕೊಳ್ಳುತ್ತಿದ್ದಂತೆ ಟೋಲ್ ಸಿಬ್ಬಂದಿಗೆ ಮಾಹಿತಿ ರವಾನಿಸಲಾಗಿದೆ. ಮಾಹಿತಿ ತಿಳಿದರೂ ಸಿಬ್ಬಂದಿ ಸ್ಥಳಕ್ಕೆ ಬಂದು ಬೆಂಕಿ ನಂದಿಸಲು ಸಹಕರಿಸಿಲ್ಲ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.
ಬಳಿಕ ಸ್ಥಳಕ್ಕೆ ಆಗಮಿಸಿದ ಹೊಸಕೋಟೆ ಪೊಲೀಸರು ಪರೀಶೀಲನೆ ನಡೆಸಿದ್ದು, ಲಾರಿಯ ಸುತ್ತಾ ಆವರಿಸಿದ ಜನಸಂದಣಿಯನ್ನು ದೂರ ಸರಿಸಿ, ತನಿಖೆ ಮುಂದುವರೆಸಿದ್ದಾರೆ.
ಇದನ್ನೂ ಓದಿ : ನೀಟ್ ಮರುಪರೀಕ್ಷೆಯಲ್ಲೂ ವಂಚನೆ ಜಾಲ : ಬಿಹಾರದಲ್ಲಿ 9 ನಕಲಿ ಅಭ್ಯರ್ಥಿಗಳು ಸೇರಿ 30 ಮಂದಿ ಬಂಧನ!


















