ಬೆಂಗಳೂರು: ಏಕಾಏಕಿ ಮರದ ಕೊಂಬೆ ಬಿದ್ದು ಬೈಕ್ ಸವಾರಿಣಿ ಸ್ಥಳದಲ್ಲೆ ಸಾವನ್ನಪ್ಪಿರುವ ಘಟನೆ ನಗರದ ಉತ್ತರ ತಾಲೂಕಿನ ಸೋಲದೇವನಹಳ್ಳಿ ಠಾಣೆ ಬಳಿ ನಡೆದಿದೆ.
ಹೆಬ್ಬಾಳ ಭಾಗದ ಕೀರ್ತನ (24) ಮೃತಪಟ್ಟ ಯುವತಿ.
ಭಾನುವಾರ ರಾತ್ರಿ 7 ಗಂಟೆಯ ಸುಮಾರಿಗೆ ರಸ್ತೆ ಮೇಲೆ ಏಕಾಏಕಿ ಎರಡು ಬೈಕ್ ಗಳ ಮೇಲೆ ಬೃಹತ್ ಮರ ಬಿದ್ದ ಪರಿಣಾಮ, ಬೈಕ್ ನಲ್ಲಿ ಸವಾರಿ ಮಾಡುತ್ತಿದ್ದ ಕೀರ್ತನ ಸಾವನಪ್ಪಿದ್ದು, ಇನ್ನೊಂದು ಬೈಕ್ ನಲ್ಲಿದ್ದ ಭಾಸ್ಕರ್ ಎಂಬುವವರಿಗೆ ಗಂಭೀರ ಗಾಯವಾಗಿದೆ.
ಯುವತಿಯ ಮೃತದೇಹವನ್ನು ಸಪ್ತಗಿರಿ ಆಸ್ಪತ್ರೆಗೆ ರವಾನೆ ಮಾಡಲಾಗಿದ್ದು, ಗಾಯಳುವಿಗೆ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಸೋಲದೇವನಹಳ್ಳಿ ಪೊಲೀಸರು ಮಾಹಿತಿ ನೀಡಿದ್ದಾರೆ.



















