ಮೈಸೂರು: ಸಿದ್ದರಾಮಯ್ಯ ಅಂದರೆ ಸಮಾವೇಶ, ಸಮಾವೇಶ ಅಂದರೆ ಸಿದ್ದರಾಮಯ್ಯ. ಸಿಎಂ ಸ್ಥಾನ ಅಲ್ಲಾಡುವ ವೇಳೆಯಲ್ಲಿ ಈ ರೀತಿಯ ಸಮಾವೇಶ ಮಾಡಿ ಕಾಂಗ್ರೆಸ್ ಹೈಕಮಾಂಡ್ ಗೆ ಬೆದರಿಸುವ ತಂತ್ರ ಸಿದ್ದರಾಮಯ್ಯ ಗೆ ಸಿದ್ಧಿಸಿದೆ ಎಂದು ಚಾಮುಂಡಿ ಬೆಟ್ಟದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದ್ದಾರೆ.
ಸಿಎಂ ಸಿದ್ದರಾಮಯ್ಯಗೆ ದೆಹಲಿಯಲ್ಲಿ ರಾಹುಲ್ ಗಾಂಧಿ ಭೇಟಿಗೆ ಸಮಯವೇ ಸಿಕ್ಕಿಲ್ಲ. ರಾಹುಲ್ ಗಾಂಧಿ ಸಮಯ ಕೂಡ ಕೊಟ್ಟಿಲ್ಲ. ಹೀಗಾಗಿ ಕಾಂಗ್ರೆಸ್ ಗೆ ಸವಾಲು ಹಾಕಲು ಸಾಧನಾ ಸಮಾವೇಶ ಮಾಡ್ತಿದ್ದಾರೆ. ಇದು ಸಾಧನಾ ಸಮಾವೇಶ ಅಲ್ಲ. ಕಾಂಗ್ರೆಸ್ ಹೈಕಮಾಂಡ್ ಗೆ ಮಾಡುತ್ತಿರುವ ಬ್ಲ್ಯಾಕ್ ಮೇಲ್ ಸಮಾವೇಶ. ರಾಜ್ಯಕ್ಕಾಗಿ ಏನು ಕಡಿದು ಕಟ್ಟೆ ಹಾಕಿದ್ದಾರೆ ಎಂದು ಸಮಾವೇಶ ಮಾಡುತ್ತಿದ್ದಾರೆ? ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವ ಸಮಯ ಬಂದಿದೆ. ಹೀಗಾಗಿ ಹೈಕಮಾಂಡ್ ಅನ್ನು ಬೆದರಿಸಲು ಸಿಎಂ ಸಮಾವೇಶ ಮಾಡುತ್ತಿದ್ದಾರೆ ಎಂದಿದ್ದಾರೆ.


















