ಜೈಪುರ: ಇತ್ತೀಚಿನ ದಿನಗಳಲ್ಲಿ ಹೃದಯಾಘಾತಗಳು ಹೆಚ್ಚಾಗುತ್ತಿವೆ. ಯುವಕರು ಕೂಡ ಹೃದಯಾಘಾತಕ್ಕೆ ಬಲಿಯಾಗುತ್ತಿರುವುದು ದುರ್ದೈವದ ಸಂಗತಿ. ಇಂತಹ ಮತ್ತೊಂದು ಘಟನೆ ಈಗ ಸಾಮಾಜಿಕ ಜಾಲತಾಣದಲ್ಲಿ ಭಾರೀ ವೈರಲ್ ಆಗುತ್ತಿದೆ.
ಶಿಕ್ಷಕರೊಬ್ಬರು ಖುಷಿಯಿಂದ ಡಾನ್ಸ್ ಮಾಡುತ್ತಿರುವಾಗಲೇ ಹೃದಯಾಘಾತಕ್ಕೆ ಬಲಿಯಾಗಿ ಕುಸಿದು ಬಿದ್ದಿದ್ದಾರೆ. ಈ ಕುರಿತ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದೆ. ಈ ಘಟನೆ ರಾಜಸ್ಥಾನದ ಜೈಪುರದಲ್ಲಿ ನಡೆದಿದೆ. ಸಮಾರಂಭವೊಂದರಲ್ಲಿ ತೃತೀಯಲಿಂಗಿಯೊಂದಿಗೆ ನೃತ್ಯ ಮಾಡುವಾಗ ಶಿಕ್ಷಕ ಕುಸಿದು ಬಿದ್ದಿರುವುದು ವಿಡಿಯೋದಲ್ಲಿದೆ.
ಮೃತ ಶಿಕ್ಷಕನನ್ನು ಮನ್ನಾ ರಾಮ್ ಜಖರ್ ಎಂದು ಗುರುತಿಸಲಾಗಿದೆ. ಶಿಕ್ಷಕರ ನಿವೃತ್ತಿ ಸಮಾರಂಭದ ಕಾರ್ಯಕ್ರಮ ನಡೆದಿದ್ದ ಸಂದರ್ಭದಲ್ಲಿ ನೃತ್ಯ ತಂಡ ಕರೆಸಲಾಗಿತ್ತು. ನೃತ್ಯ ಸಂಗೀತ ಕಾರ್ಯಕ್ರಮ ನಡೆಯುತ್ತಿರುವಾಗ ಶಿಕ್ಷಕ ಖಷಿಯಿಂದ ಕುಣಿಯಲು ಪ್ರಾರಂಭಿಸಿದ್ದಾರೆ. ಆದರೆ, ಅದೆ ಖುಷಿಯಲ್ಲಿ ಇಹಲೋಕ ತ್ಯಜಿಸಿದ್ದಾರೆ.