ಪಾಟ್ನಾ: ಕಾರು ಹಾಗೂ ಆಟೋ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ 6 ಜನ ಸಾವನ್ನಪ್ಪಿರುವ ಘಟನೆ ನಡೆದಿದೆ.
ಬಿಹಾರದ (Bihar) ಬೇಗುಸರಾಯ್ ನಲ್ಲಿ ಆಟೋ ಹಾಗೂ ಕಾರಿನ ಮಧ್ಯೆ ಅಪಘಾತ (Accident) ಸಂಭವಿಸಿ 6 ಜನ ಸಾವನ್ನಪ್ಪಿದ್ದಾರೆ. ಅಲ್ಲದೇ, ಮೂವರು ಗಂಭೀರವಾಗಿ ಗಾಯಗೊಂಡಿದ್ದು, ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.
ಸಿಮಾರಿಯಾದಿಂದ ಝೆರೊಮೈಲ್ ಕಡೆಗೆ ಪ್ರಯಾಣಿಸುತ್ತಿದ್ದ ಆಟೋ ರತನ್ ಚೌಕ್ ಹತ್ತಿರ ಕಾರಿಗೆ ಡಿಕ್ಕಿಯಾಗಿದೆ. ಪರಿಣಾಮ 6 ಜನ ಸಾವನ್ನಪ್ಪಿದ್ದಾರೆ. ಅಪಘಾತದ ಸ್ಥಳದ ವೀಡಿಯೋಗಳನ್ನು ಜನ ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ. ರಸ್ತೆಯ ಮೇಲೆ ಚೆಲ್ಲಾಪಿಲ್ಲಿಯಾದ ಸಂತ್ರಸ್ತರ ರಕ್ತಸಿಕ್ತ ದೇಹಗಳು ವೀಡಿಯೋದಲ್ಲಿ ಸೆರೆಯಾಗಿವೆ.
ಆದರೆ, ಸಂತ್ರಸ್ತರ ಗುರುತು ಇನ್ನೂ ಪತ್ತೆಯಾಗಿಲ್ಲ. ಸಂತ್ರಸ್ತರ ಗುರುತು ಪತ್ತೆಗೆ ಪೊಲೀಸರು ಕ್ರಮಕೈಗೊಂಡಿದ್ದಾರೆ.