ವಿಜಯಪುರ: ಭೀಕರ ರಸ್ತೆ ಅಪಘಾತಕ್ಕೆ ಐವರು ಬಲಿಯಾಗಿರುವ ಘಟನೆ ನಡೆದಿದೆ.
ಜಿಲ್ಲೆಯ ತಾಳಿಕೋಟೆ ತಾಲೂಕಿನ ಬಿಳೆಬಾವಿ ಕ್ರಾಸ್ ಹತ್ತಿರ ಈ ಘಟನೆ ನಡೆದಿದೆ. ಚಲಿಸುತ್ತಿದ್ದ ಕಾರಿಗೆ ಕಟಾವು ಮಷಿನ್ ಡಿಕ್ಕಿ ಹೊಡೆದ ಪರಿಣಾಮ ಈ ಘಟನೆ ನಡೆದಿದೆ. ತಾಲೂಕು ಅಲಿಯಾಬಾದ್ ನಿವಾಸಿಗಳಾದ ನಿಂಗಪ್ಪಾ ಪಾಟೀಲ್ (55), ಶಾಂತವ್ವ ಶಂಕರ ಪಾಟೀಲ್ (45), ಭೀಮಶಿ ಸಂಕನಾಳ (65), ಶಶಿಕಲಾ ಜೈನಾಪೂರ (50) ಹಾಗೂ ದಿಲೀಪ್ ಪಾಟೀಲ್ (45) ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರೆಲ್ಲ ಯಾದಗಿರಿ ಜಿಲ್ಲೆಗೆ ಹೋಗಿ ಮರಳಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ತಾಳಿಕೋಟೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.