ಎರಡು ಕಾರುಗಳ ಮಧ್ಯೆ ಭೀಕರ ಅಪಘಾತ ಸಂಭವಿಸಿದ ಪರಿಣಾಮ ಒಂದೇ ಕುಟುಂಬದ ನಾಲ್ವರು ಸಾವನ್ನಪ್ಪಿರುವ ಘಟನೆ ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ತಡಸ ಕ್ರಾಸ್ ಬಳಿ ನಡೆದಿದೆ.
ಅಲ್ಲದೇ, ಮತ್ತೊಂದು ಪ್ರಕರಣದಲ್ಲಿ ಕಲಬುರಗಿ ಜಿಲ್ಲೆಯಲ್ಲಿ ಟಿಟಿ ವಾಹನದ ಟೈಯರ್ ಬ್ಲಾಸ್ಟ್ ಆದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ. ಕಲಬುರಗಿ ಹತ್ತಿರದ ಗೊಬ್ಬೂರ್(ಬಿ) ಗ್ರಾಮದ ಹತ್ತಿರ ಟಿಟಿ, ಲಾರಿ ಮತ್ತು ಬೈಕ್ ಮಧ್ಯೆ ಸರಣಿ ಅಪಘಾತ ಸಂಭವಿಸಿದ್ದು, ಮೂವರು ಸಾವನ್ನಪ್ಪಿದ್ದಾರೆ.
ಅನೂಪ್ ಮಾಧವ್(29), ವಿನುತಾ(54) ಹಾಗೂ ಬಸವರಾಜ್(33) ಸಾವನ್ನಪ್ಪಿದ ದುರ್ದೈವಿಗಳು. ಮೃತ ವಿನೂತಾ ಹಾಗೂ ಅನೂಪ್ ಮಾಧವ್ ಕಲಬುರಗಿಯ ಸ್ಟೇಷನ್ ಬಜಾರ್ ಪ್ರದೇಶದ ನಿವಾಸಿಗರು. ಬೈಕ್ ಸವಾರ ಬಸವರಾಜ್ ಗೊಬ್ಬೂರ್ (ಬಿ) ಗ್ರಾಮದ ನಿವಾಸಿ ಎನ್ನಲಾಗಿದೆ.
ಟಿಟಿಯಲ್ಲಿದ್ದ 7 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಟಿಟಿ ವಾಹನದ ಟೈರ್ ಬ್ಲಾಸ್ಟ್ ಆಗಿದ್ದರಿಂದ ಈ ದುರಂತ ಸಂಭವಿಸಿದ್ದು, ಬೈಕ್ ಸವಾರ ಹಾಗೂ ಟಿಟಿ ವಾಹನದಲ್ಲಿದ್ದ ಇಬ್ಬರು ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.