ಆಗ್ರಾ : ತೀರ್ಥಯಾತ್ರೆ ಮುಗಿಸಿ ಹಿಂತಿರುಗುತ್ತಿದ್ದ ವೇಳೆ ಬೊಲೆರೊ ಕಾರು ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಐವರು ಸ್ಥಳದಲ್ಲೇ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ.
ಉತ್ತರ ಪ್ರದೇಶದ ಆಗ್ರಾ ಜಿಲ್ಲೆಯಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಅಪಘಾತದಲ್ಲಿ ಐದು ಜನರು ದಾರುಣವಾಗಿ ಸಾವನ್ನಪ್ಪಿದ್ದಾರೆ. ಕೈಲಾ ದೇವಿಗೆ ಯಾತ್ರೆಗೆ ತೆರಳಿ ಹಿಂತಿರುಗುತ್ತಿದ್ದ ವೇಳೆ ಈ ದುರ್ಘಟನೆ ನಡೆದಿದೆ. ಇತರ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ವರದಿಗಳ ಪ್ರಕಾರ, ಮೃತರಲ್ಲಿ ಪತಿ, ಪತ್ನಿ, ಮಗಳು, ತಂದೆ ಮತ್ತು ಚಾಲಕ ಸೇರಿದ್ದಾರೆ. ಪೊಲೀಸರು ಸ್ಥಳಕ್ಕೆ ಆಗಮಿಸಿ ತನಿಖೆ ಆರಂಭಿಸಿದ್ದಾರೆ. ಅವರು ಎಲ್ಲಾ ಶವಗಳನ್ನು ವಶಕ್ಕೆ ಪಡೆದು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಗಾಯಾಳುಗಳನ್ನು ಚಿಕಿತ್ಸೆಗಾಗಿ ಸೈಫೈ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ. ಚಿತ್ರಹತ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಈ ದುರಂತ ಅಪಘಾತ ಸಂಭವಿಸಿದೆ. ಚಾಲಕ ನಿದ್ದೆಯ ಮಂಪರಿನಲ್ಲಿದ್ದದ್ದೇ ಈ ಭೀಕರ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ : ಯುವಕನನ್ನು ಹತ್ಯೆಗೈದು ಮೂಳೆಯೂ ಸಿಗದಂತೆ ಸುಟ್ಟು ಹಾಕಿದ ದುಷ್ಟರು!



















