ಹಾವೇರಿ: ತಿರುಪತಿಗೆ ತೆರಳುತ್ತಿದ್ದವರು ಮಸಣ ಸೇರಿರುವ ಘಟನೆಯೊಂದು ನನಡೆದಿದೆ. ರಾಣೆಬೆನ್ನೂರು ಹತ್ತಿರವಿರುವ ರಾಷ್ಟ್ರೀಯ ಹೆದ್ದಾರಿ 4ರಲ್ಲಿ (NH 4)ಯಲ್ಲಿ ಭೀಕರ ಅಪಘಾತ ಸಂಭವಿಸಿದ್ದು, ನಾಲ್ವರು ಸಾವನ್ನಪ್ಪಿರುವ ಘಟನೆ ನಡೆದಿದೆ.
ಸುರೇಶ್ (45), ಐಶ್ವರ್ಯ (22), ಚೇತನಾ (7) ಸ್ಥಳದಲ್ಲಿ ಸಾವನ್ನಪ್ಪಿದ ದುರ್ದೈವಿಗಳು. ಪ್ರಮೀಳಾ (28) ಎಂಬುವವರನ್ನು ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಿಸಿದಾಗ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ಸಾವನ್ನಪ್ಪಿದ ನಾಲ್ವರು ಕೂಡ ಹಾವೇರಿ ಪಟ್ಟಣದ ಅಶ್ವಿನಿ ನಗರ ನಿವಾಸಿಗಳಾಗಿದ್ದು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ತೆರಳುತ್ತಿದ್ದರು ಎಂದು ತಿಳಿದು ಬಂದಿದೆ.
ಮಧ್ಯರಾತ್ರಿ ಕಾರು ಚಾಲಕನ ನಿಯಂತ್ರಣ ತಪ್ಪಿ, ಕಾರು ಪಲ್ಟಿಯಾಗಿ ಸರ್ವಿಸ್ ರಸ್ತೆಗೆ ಬಿದ್ದಿದೆ. ಘಟನಾ ಸ್ಥಳಕ್ಕೆ ಹಾವೇರಿ (Haveri) ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.