ರಾಮನಗರ: ಭೀಕರ ಅಪಘಾತಕ್ಕೆ ಮೂವರು ಬಲಿಯಾಗಿರುವ ಘಟನೆ ನಡೆದಿದೆ.
ಬೆಂಗಳೂರು- ಮೈಸೂರು ಎಕ್ಸ್ಪ್ರೆಸ್ ವೇನಲ್ಲಿ ರಾಮನಗರ ತಾಲೂಕಿನ ಸಂಗಬಸವನದೊಡ್ಡಿ ಎಂಬಲ್ಲಿ ಈ ಘಟನೆ ನಡೆದಿದೆ. ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಗೆ ಕಾರು ಗುದ್ದಿ ನಂತರ ಅದು ಎದುರು ಬದಿ ಬರುತ್ತಿದ್ದ ಸಾರಿಗೆ ಬಸ್ ಗೆ ಗುತ್ತಿದೆ. ಹೀಗಾಗಿ ಕಾರಿನಲ್ಲಿದ್ದ ಇಬ್ಬರು ಪುರುಷರು, ಹಾಗೂ ಓರ್ವ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಸಾವನ್ನಪ್ಪಿದವರನ್ನು ಬೆಂಗಳೂರಿನ ಶಿವಾಜಿನಗರದ ಲಿಯಾಕತ್ (50), ಅಸ್ಮಾ (38), ನೂರ್ (40) ಎಂದು ಗುರುತಿಸಲಾಗಿದೆ. ಕಾರಿನಲ್ಲಿದ್ದವರು ಮೈಸೂರಿಗೆ ಹೊರಟಿದ್ದರು ಎನ್ನಲಾಗಿದೆ. ಈ ವೇಳೆ ಈ ದುರ್ಘಟನೆ ಸಂಭವಿಸಿದೆ. ಕೂಡಲೇ ಸ್ಥಳಕ್ಕೆ ಆಗಮಿಸಿದ ಪೊಲೀಸರು ಪರಿಸಲೀನೆ ನಡೆಸಿದ್ದಾರೆ.