ಬಳ್ಳಾರಿ: ಮರಕ್ಕೆ ಕಾರು (Car) ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ವೈದ್ಯರು, ಓರ್ವ ವಕೀಲ ಬಲಿಯಾಗಿರುವ ಘಟನೆ ನಡೆದಿದೆ.
ಗಡಿ ಭಾಗದ ವಿಡಪನಕಲ್ ಎಂಬಲ್ಲಿ ಈ ಘಟನೆ ನಡೆದಿದೆ. ಘಟನೆಯಲ್ಲಿ ಬಳ್ಳಾರಿ ಬಿಮ್ಸ್ (BIMS) ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ಓರ್ವ ವಕೀಲ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಡಾ.ಗೋವಿಂದರಾಜುಲು, ಡಾ.ಯೋಗೇಶ್ ಹಾಗೂ ವಕೀಲ ವೆಂಕಟನಾಯ್ಡು (55) ಸಾವನ್ನಪ್ಪಿರುವ ದುರ್ದೈವಿಗಳು ಎನ್ನಲಾಗಿದೆ. ಅಲ್ಲದೇ, ಘಟನೆಯಲ್ಲಿ ಮತ್ತೋರ್ವ ವೈದ್ಯ ಅಮರೇಗೌಡ ಪಾಟೀಲ್ ಸ್ಥಿತಿ ಗಂಭೀರವಾಗಿದೆ. ನಾಲ್ವರು ಸ್ನೇಹಿತರು ವಿದೇಸಿ ಪ್ರವಾಸಕ್ಕೆ ತೆರಳಿ ಮರಳಿ ಬರುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬೆಂಗಳೂರು ವಿಮಾನ ನಿಲ್ದಾಣದಿಂದ ಅನಂತಪುರ ಮಾರ್ಗವಾಗಿ ಮರಳಿ ಬಳ್ಳಾರಿಗೆ ಬರುತ್ತಿದ್ದ ಸಂದರ್ಭದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.