ಗಾಂಧಿನಗರ: ಐದು ವರ್ಷದ ಬಾಲಕಿಯ ಕತ್ತು ಸೀಳಿದ ಕೀಚಕನೊಬ್ಬ ದೇವಾಲಯದ (Temple) ಮೆಟ್ಟಿಲುಗಳ ಮೇಲೆ ರಕ್ತ ಅರ್ಪಿಸಿದ ಘಟನೆಯೊಂದು ನಡೆದಿದೆ.
ಗುಜರಾತ್‌ನ (Gujarat) ಛೋಟೌದೇಪುರ ಜಿಲ್ಲೆಯಲ್ಲಿ ಈ ಘಟನೆ ನಡೆದಿದೆ. ಲಾಲಾ ತಡ್ವಿ ಬಂಧಿತ ಆರೋಪಿ ಎನ್ನಲಾಗಿದೆ. ಆರೋಪಿ, ಬುಡಕಟ್ಟು ಪ್ರಾಬಲ್ಯ ಹೊಂದಿರುವ ಜಿಲ್ಲೆ ಪನೇಜ್ ಗ್ರಾಮದಲ್ಲಿ ಬೆಳಿಗ್ಗೆ ಆಕೆಯ ತಾಯಿಯ ಎದುರೇ ಬಾಲಕಿಯನ್ನು ಅಪಹರಿಸಿದ್ದ ಎನ್ನಲಾಗಿದೆ.
ಅಪಹರಿಸಿದ ಬಾಲಕಿಯನ್ನು ತನ್ನ ಮನೆಗೆ ಕರೆದುಕೊಂಡು ಬಂದು, ಕುತ್ತಿಗೆ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ, ಹೊರಬರುತ್ತಿದ್ದ ರಕ್ತವನ್ನು ಸಂಗ್ರಹಿಸಿ, ಅದರಲ್ಲಿ ಸ್ವಲ್ಪ ಭಾಗವನ್ನು ತನ್ನ ಮನೆಯಲ್ಲಿರುವ ದೇವಾಲಯದ ಮೆಟ್ಟಿಲುಗಳ ಮೇಲೆ ಅರ್ಪಿಸಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ.
ಆರೋಪಿಯು ಮಾಂತ್ರಿಕನಂತೆ ಕಾಣುತ್ತಿಲ್ಲ. ಆದರೆ, ಕೊಲೆಯ ಹಿಂದಿನ ಕಾರಣ ತಿಳಿದು ಬಂದಿಲ್ಲ. ಆತ ಮಾನಸಿಕ ಅಸ್ವಸ್ಥನಂತೆ ಕಾಣುತ್ತಿದ್ದಾನೆ. ಈ ಕುರಿತು ತನಿಖೆ ನಡೆಸುತ್ತಿದೆ ಎಂದು ಪೊಲೀಸರು ಹೇಳಿದ್ದಾರೆ.