ಕಾರವಾರ: ಹಾವು ಕಚ್ಚಿದ ಪರಿಣಾಮ 3 ವರ್ಷದ ಬಾಲಕಿ ಸಾವನ್ನಪ್ಪಿರುವ ಹೃದಯ ವಿದ್ರಾವಕ ಘಟನೆಯೊಂದು ನಡೆದಿದೆ.
ಅಂಗನವಾಡಿಗೆ ತೆರಳಿದ್ದ ಮೂರು ವರ್ಷದ ಬಾಲಕಿ ಹಾವು ಕಚ್ಚಿ ಸಾವನ್ನಪ್ಪಿದ್ದಾಳೆ ಎನ್ನಲಾಗಿದೆ. ಕಾರವಾರ (Karwar) ಜಿಲ್ಲೆಯ ಮುಂಡಗೋಡು (Mundagodu) ಅಳೂರು ಓಣಿಯಲ್ಲಿ ಈ ಘಟನೆ ನಡೆದಿದೆ.
ಹಾವು ಕಡಿತಕ್ಕೆ ಬಲಿಯಾಗಿರುವ ಬಾಲಕಿಯನ್ನು ಮಯೂರಿ(3) ಎಂದು ಗುರುತಿಸಲಾಗಿದೆ. ಸ್ಥಳೀಯ ಮಾರಿಕಾಂಬ ಅಂಗನವಾಡಿಗೆ ಬಾಲಕಿ ತೆರಳಿದ್ದ ಸಂದರ್ಭದಲ್ಲಿ ಈ ದುರ್ಘಟನೆ ಸಂಭವಿಸಿದೆ.
ಹೊರಬದಿಯ ಶೌಚಾಲಯಕ್ಕೆ ತೆರಳಿದ್ದ ಸಂದರ್ಭದಲ್ಲಿ ಮಗುವಿನ ಕಾಲಿಗೆ ಹಾವು ಕಚ್ಚಿದೆ. ಕಚ್ಚಿದ ಕೂಡಲೇ ಮಗುವನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮಗು ಸಾವನ್ನಪ್ಪಿದೆ. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು