ಕೋಲಾರ: ಕೆಟ್ಟು ನಿಂತಿದ್ದ ಟಿಪ್ಪರ್, ಟ್ರಕ್ (Truck)ಗೆ ಡಿಕ್ಕಿ ಹೊಡೆದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಶ್ರೀನಿವಾಸಪುರ (Srinivaspur) ತಾಲೂಕಿನ ಕೇತಗಾನಹಳ್ಳಿ (Kethaganahalli) ಗ್ರಾಮದ ಹತ್ತಿರ ಮಂಗಳವಾರ ಬೆಳಗ್ಗೆ ನಡೆದಿದೆ. ಶಿವಪುರ ಗ್ರಾಮದ ಟಿಪ್ಪರ್ ಚಾಲಕ ಬಾಬು (30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ರಸ್ತೆಯಲ್ಲಿ ಕೆಟ್ಟು ನಿಂತಿದ್ದ ಟಿಪ್ಪರ್ ರಿಪೇರಿ ಮಾಡುತ್ತಿದ್ದ ಬಾಬು ಮೇಲೆ ಟ್ರಕ್ ಹರಿದ ಪರಿಣಾಮ ಅವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಶ್ರೀನಿವಾಸಪುರ-ಮುಳಬಾಗಿಲು ಹೆದ್ದಾರಿಯಲ್ಲಿ ಈ ಘಟನೆ ನಡೆದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.