ಹಾವೇರಿ: ವ್ಯಕ್ತಿಯೋರ್ವ ಮೊಬೈಲ್ ನಲ್ಲಿ ಸ್ಟೇಟಸ್ ಹಾಕಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಹಾನಗಲ್ (Hangal) ತಾಲೂಕಿನ ಹೇರೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಸಂಜೀವ ಚನ್ನಬಸಪ್ಪ ಬಾಗಣ್ಣವರ(28) ಆತ್ಮಹತ್ಯೆ ಮಾಡಿಕೊಂಡ ಯುವಕ. ನಮ್ಮ ದೇವರು ನನ್ನ ಇವತ್ತು ಕರೆಸಿಕೊಳ್ಳುತ್ತಿದ್ದಾನೆ. ನಮ್ಮ ಬೋರ್ವೆಲ್ ಪಂಪ್ ಸೆಡ್ ನಲ್ಲಿ ನನ್ನ ಉಸಿರು ನಿಂತಿದೆ. ತಮ್ಮ, ಅಪ್ಪನನ್ನು ಚೆನ್ನಾಗಿ ನೋಡಿಕೊ ಎಂದು ಸ್ಟೇಟಸ್ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಆದರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಆಡೂರು ಪೊಲೀಸ್ ಠಾಣೆಯ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.