ಕಟಾವು ಮಾಡಿದ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್ ಗೆ ಬೆಂಕಿ(fire) ತಗುಲಿರುವ ಘಟನೆ ನಡೆದಿದೆ. ಈ ಘಟನೆ ಅಥಣಿ ತಾಲೂಕಿನ ನದಿ ಇಂಗಳಗಾಂವ ಗ್ರಾಮದಲ್ಲಿ ನಡೆದಿದೆ.
ಟ್ರ್ಯಾಕ್ಟರ್ಗೆ ಬೆಂಕಿ ತಗುಲಿರುವ ಹಿನ್ನೆಲೆಯಲ್ಲಿ ಕಬ್ಬು(suger cane) ಸಮೇತ ಲಕ್ಷಾಂತರ ರೂ. ಮೌಲ್ಯದ ಟ್ರ್ಯಾಕ್ಟರ್ ಹಾಗೂ ಟ್ರೈಲರ್ ಸಂಪೂರ್ಣ ಸುಟ್ಟು ಭಸ್ಮವಾಗಿದೆ.
ಹೊಲದಲ್ಲಿ ಕಬ್ಬು ತುಂಬುವ ಸಂದರ್ಭದಲ್ಲಿ ಅಚಾನಕ್ಕಾಗಿ ಬೆಂಕಿ ತಗುಲಿದ್ದು ಟ್ರ್ಯಾಕ್ಟರ್ ಸಂಪೂರ್ಣ ಸುಟ್ಟು ಕರಕಲಾಗಿದೆ. ಸ್ಥಳೀಯರು ಬೆಂಕಿ ಆರಿಸಲು ಹರಸಾಹಸ ಪಟ್ಟರು ಸಾಧ್ಯವಾಗಿಲ್ಲ. ಘಟನೆಯಿಂದ ಸುಮಾರು 6 ಲಕ್ಷ ರೂ. ಗೂ ಅಧಿಕ ಮೌಲ್ಯದ ನಷ್ಟ ಸಂಭವಿಸಿದೆ. ಅಥಣಿ ಪೊಲೀಸ್ ಠಾಣೆ(police station) ವ್ಯಾಪ್ತಿಯಲ್ಲಿ ಈ ಘಟನೆ ಸಂಭವಿಸಿದೆ.