ಬೆಂಗಳೂರು : ಇಲ್ಲಿಯ ಹೆಬ್ಬಾಳ ವ್ಯಾಪ್ತಿಯಲ್ಲಿ ರೈಲಿಗೆ ತಲೆ ಕೊಟ್ಟು ವ್ಯಕ್ತಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಸಾಲದಿಂದಾಗಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ.
ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ತೀವ್ರ ನಷ್ಟ ಅನುಭವಿಸಿದ ಹಿನ್ನೆಲೆಯಲ್ಲಿ ವೆಂಕಟೇಶ್(50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ. ಷೇರು ಮಾರುಕಟ್ಟೆಯಲ್ಲಿ ತೀವ್ರ ನಷ್ಟ ಎದುರಿಸಿದ್ದಲ್ಲದೇ, ಅನಾರೋಗ್ಯದಿಂದ ಕೂಡ ಬಳಲುತ್ತಿದ್ದರು ಎನ್ನಲಾಗಿದೆ. ಆ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ತಿಳಿದು ಬಂದಿದೆ.
ಮೃತ ವೆಂಕಟೇಶ್ ಕೆಲ ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ. ಅಲ್ಲದೇ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿ ಲಾಸ್ ಕೂಡ ಆಗಿತ್ತು. ಸಾಲಗಾರರ ಕಾಟ ವಿಪರೀತವಾಗಿತ್ತು. ಇನ್ನೊಂದೆಡೆ ಆರೋಗ್ಯ ಕೂಡ ಕೈ ಕೊಟ್ಟಿತ್ತು. ಇದರಿಂದ ಮನನೊಂದು ರೈಲ್ವೆ ಟ್ರ್ಯಾಕ್ ಗೆ ತಲೆ ಕೊಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಸದ್ಯ ಘಟನಾ ಸ್ಥಳಕ್ಕೆ ಬೈಯಪ್ಪನಹಳ್ಳಿ ರೈಲ್ವೆ ಪೊಲೀಸರು, ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ ; ರಥದ ಚಕ್ರ ಹರಿದು ಮಹಿಳೆಯ ಎರಡು ಕಾಲ್ ಕಟ್!



















