ಬೆಂಗಳೂರು: ನಗರದಲ್ಲಿನ ಎರಡು ಅಂತಸ್ತಿನ ಕಟ್ಟಡ ದಿಢೀರ್ ಕುಸಿತ ಕಂಡಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ.
ಸಿಲಿಕಾನ್ ಸಿಟಿಯ ಜೀವನ್ ಭೀಮಾನಗರ ವ್ಯಾಪ್ತಿಯ ತಿಪ್ಪಸಂದ್ರದಲ್ಲಿ ಈ ಘಟನೆ ನಡೆದಿದೆ. ಸಂಜೆ ಐದು ಗಂಟೆ ವೇಳೆಗೆ ಈ ಘಟನೆ ನಡೆದಿದೆ. ದಿಢೀರ್ ಎಂದು ಮನೆಯ ಬೇಸ್ಮೆಂಟ್ ಕುಸಿದಿದೆ. ಆದರೆ, ಸದ್ಯಕ್ಕೆ ಯಾವುದೇ ಪ್ರಾಣಾಪಾಯ ಸಂಭವಿಸಿರುವ ಕುರಿತು ವರದಿಯಾಗಿಲ್ಲ.
ಸ್ಥಳಕ್ಕೆ ಜೀವನ್ ಭೀಮಾನಗರ ಠಾಣೆ ಪೊಲೀಸರು, ಅಗ್ನಿಶಾಮಕದಳ ಸಿಬ್ಬಂದಿ ದೌಡಾಯಿಸಿದ್ದಾರೆ. ಸದ್ಯ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಟ್ಟಡ ತೆರವು ಕಾರ್ಯಾಚರಣೆ ನಡೆದಿದೆ.