ಚಿಕ್ಕಮಗಳೂರು: ಪ್ರವಾಸಕ್ಕಕೆಂದು ಬಂದಿದ್ದ ಶಾಲಾ ವಿದ್ಯಾರ್ಥಿಗಳಿದ್ದ ಬಸ್ ಪಲ್ಟಿಯಾಗಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕೈಮರ ಚೆಕ್ ಪೋಸ್ಟ್ ಹತ್ತಿರ ನಡೆದಿದೆ. ಈ ಘಟನೆಯಲ್ಲ ಐವರು ಮಕ್ಕಳು ಗಾಯಗೊಂಡಿದ್ದಾರೆ. ಮೈಸೂರಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿಗಳು ಸರ್ಕಾರಿ ಬಸ್ ನಲ್ಲಿ ಮುಳ್ಳಯ್ಯನಗಿರಿಗೆ ಪ್ರವಾಸಕ್ಕೆಂದು ಬಂದಿದ್ದರು.
ಚಿಕ್ಕಮಗಳೂರಿಗೆ ಬಂದು, ಅಲ್ಲಿಂದ ಮುಳ್ಳಯ್ಯನಗಿರಿಗೆ ಟ್ಯಾಕ್ಸ್ ಮಾಡಿಕೊಂಡು ಹೊರಟಿದ್ದರು. ಈ ಸಂದರ್ಭದಲ್ಲಿ ಕೈಮರದ ಹತ್ತಿರ ಟ್ಯಾಕ್ಸ್ ಟೈರ್ ಸ್ಫೋಟಗೊಂಡ ಪರಿಣಾಮ ಈ ಘಟನೆ ನಡೆದಿದೆ. ಪರಿಣಾಮ 12 ವಿದ್ಯಾರ್ಥಿಗಳಲ್ಲಿ ಐವರು ಗಾಯಗೊಂಡಿದ್ದಾರೆ. ಅದೃಷ್ಟವಶಾತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.