ಬೆಳಗಾವಿ: ಕೌಟುಂಬಿಕ ಕಲಹದಿಂದಾಗಿ ಭಾರತೀಯ ಸೇನೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಯೋಧರೊಬ್ಬರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.
ಈ ಘಟನೆ ಜಿಲ್ಲೆಯ ಕಿತ್ತೂರು ತಾಲ್ಲೂಕಿನ ಪರಸನಟ್ಟಿ ಗ್ರಾಮದಲ್ಲಿ ನಡೆದಿದೆ. ಕಿತ್ತೂರು ತಾಲ್ಲೂಕಿನ ದೇಗಾಂವ ಗ್ರಾಮದ ಯೋಧ ನರೇಶ ಯಲ್ಲಪ್ಪ ಆಗಸರ (28) ಆತ್ಮಹತ್ಯೆ ಮಾಡಿಕೊಂಡಿರುವ ಯೋಧರು. ನರೇಶ್ ಇತ್ತೀಚೆಗಷ್ಟೇ ರಜೆ ಪಡೆದು ಊರಿಗೆ ಬಂದಿದ್ದರು. ಆದರೆ, ಕೆಲಸಕ್ಕೆ ಹೋಗುವುದಾಗಿ ಕುಟುಂಬಸ್ಥರಿಗೆ ಹೇಳಿ ಹೋದವರು ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕೌಟುಂಬಿಕ ಕಲಹಕ್ಕೆ ಬೇಸತ್ತು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಕಿತ್ತೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.