ರಾಜ್ಯದಲ್ಲಿ ಮುಂದಿನ ಒಂದು ವಾರಗಳ ಕಾಲ 10 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಕಲಬುರಗಿ, ಯಾದಗಿರಿ, ಚಿಕ್ಕಮಗಳೂರು, ಶಿವಮೊಗ್ಗದಲ್ಲಿ ಅತಿ ಹೆಚ್ಚು ಮಳೆಯಾಗಲಿದೆ. ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಕೋಲಾರ, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.
ಭಾನುವಾರ ರಾಜ್ಯದ ಕಾರವಾರ, ಕೋಟ, ಉಡುಪಿ, ಧರ್ಮಸ್ಥಳ, ಅಂಕೋಲಾ, ಕುಂದಾಪುರ, ಧರ್ಮಸ್ಥಳ, ಚಿತ್ತಾಪುರ, ಚಿಂಚೋಳಿ, ಕಳಸ, ಮುಲ್ಕಿ, ಬೆಳ್ತಂಗಡಿ, ಪುತ್ತೂರು, ಕಲಬುರಗಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗಿದೆ. ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಭಾನುವಾರ ಹಲವೆಡೆ ಮಳೆಯಾಗಿದೆ. ಸೋಮವಾರ ಕೂಡ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ತಿಳಿಸಿದೆ.