ಬೆಂಗಳೂರು: ರಾಜ್ಯದ ಕರಾವಳಿ ಹಾಗೂ ಮಲೆನಾಡಿನಲ್ಲಿ ಒಂದು ವಾರಗಳ ಕಾಲ ಮಳೆ(Rain)ಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
ಮಂಗಳವಾರ ಬೆಂಗಳೂರಿನಲ್ಲಿ ಒಣಹವೆ ಇರಲಿದ್ದು, ಮೋಡಕವಿದ ವಾತಾವರಣವಿರುತ್ತದೆ. 8ರಂದು ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರದಲ್ಲಿ ಇಂದು ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಏ. 8ರಂದು ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಉತ್ತರ ಒಳನಾಡಿನ ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ದಕ್ಷಿಣ ಒಳನಾಡಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಸೋಮವಾರ ಕಲಬುರಗಿಯಲ್ಲಿ 39.8 ಡಿಗ್ರಿ ಸೆಲ್ಸಿಯಸ್ ಅತ್ಯಂತ ಗರಿಷ್ಠ ಉಷ್ಣಾಂಶ ರಾಜ್ಯದಲ್ಲಿ ದಾಖಲಾಗಿದೆ.