ರಾಮನಗರ : ಬೆಂಗಳೂರು ದಕ್ಷಿಣ ಜಿಲ್ಲೆ ಕನಕಪುರ ತಾಲೂಕಿನ ಚೀಲಂದವಾಡಿ ಗ್ರಾಮದಲ್ಲಿ ಒಂಟಿ ಸಲಗ ದಾಳಿಗೆ ವ್ಯಕ್ತಿಯೋರ್ವರ ಬಲಿಯಾಗಿದೆ. ರೇಷನ್ ತರಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದ ವೇಳೆ ಕಾಡಾನೆ ದಾಳಿ ನಡೆಸಿದ ಪರಿಣಾಮ 55 ವರ್ಷದ ಕರಿಗುಂಡ ಎಂಬವರು ಮೃತಪಟ್ಟಿದ್ದಾರೆ.
ರೇಷನ್ ತರಲು ರಸ್ತೆಯಲ್ಲಿ ನಡೆದುಕೊಂಡು ಹೋಗುತ್ತಿದ್ದಾಗ ಹಿಂಬದಿಯಿಂದ ಬಂದ ಕಾಡಾನೆ ಏಕಾಏಕಿ ಕರಿಗುಂಡ ಮೇಲೆ ದಾಳಿ ನಡೆಸಿದೆ ಎನ್ನಲಾಗಿದೆ. ಪರಿಣಾಮ ಗಂಭೀರ ಗಾಯಗೊಂಡ ಅವರು ಸ್ಥಳದಲ್ಲೇ ಮೃತಪ್ಟಿದ್ದಾರೆ.
ಸಂಗಮ ಅರಣ್ಯ ವಲಯ ಪ್ರದೇಶ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಕರಿಗುಂಡ ಅವರ ಮೃತದೇಹವನ್ನು ಕನಕಪುರ ತಾಲೂಕು ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ : ಲುಂಗಿ ಎನ್‌ಗಿಡಿಗೆ ಗಂಭೀರ ಗಾಯ : ಆಸ್ಪತ್ರೆಗೆ ದಾಖಲಾದ ದಕ್ಷಿಣ ಆಫ್ರಿಕಾ ವೇಗಿ ಈಗ ಹೇಗಿದ್ದಾರೆ?


















