ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಸರಣಿ ನಡೆಯುತ್ತಿದೆ. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ ಈ ಸರಣಿ ಭಾರತದ ಪಾಲಿಗೆ ನಿರ್ಣಾಯಕವಾಗಿದೆ.
ನ್ಯೂಜಿಲೆಂಡ್ ವಿರುದ್ಧ ಮೂರು ಪಂದ್ಯಗಳ ಸರಣಿ ಇಂದಿನಿಂದ ಆರಂಭವಾಗಲಿದ್ದು, ಭಾರತಕ್ಕೆ ಇದು ನಿರ್ಣಾಯಕವಾಗಿದೆ. ಈ ಮೂರೂ ಪಂದ್ಯಗಳಲ್ಲಿ ಭಾರತ ಗೆಲುವು ಸಾಧಿಸಿದರೆ ನೇರವಾಗಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಏರಲಿದೆ. ಒಂದು ವೇಳೆ ಈ ಸರಣಿಯಲ್ಲಿ ಒಂದು ಪಂದ್ಯ ಸೋತರೂ ಆಸ್ಟ್ರೇಲಿಯಾ ವಿರುದ್ಧದ ಸರಣಿಯಲ್ಲಿ ಭಾರತ ತಂಡ ಗೆಲುವು ಸಾಧಿಸಬೇಕಾಗುತ್ತದೆ.
ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಸರಣಿಯಲ್ಲಿ ಭಾರತ ತಂಡಕ್ಕೆ ಇನ್ನೂ 8 ಪಂದ್ಯಗಳು ಬಾಕಿ ಇವೆ. ಈ 8 ಪಂದ್ಯಗಳಲ್ಲಿ ಮೂರು ಪಂದ್ಯಗಳಲ್ಲಿ ಗೆಲುವು ಅನಿವಾರ್ಯವಾಗಿದೆ. ಭಾರತ ತಂಡವು ತನ್ನ 8 ಪಂದ್ಯಗಳಲ್ಲಿ ಮೂರು ಪಂದ್ಯಗಳನ್ನು ತವರಿನಲ್ಲಿ ಆಡಿದರೆ, ಉಳಿದ ಐದು ಪಂದ್ಯಗಳನ್ನು ಆಸ್ಟ್ರೇಲಿಯಾದಲ್ಲಿ ಆಡಬೇಕಿದೆ.
ಹೀಗಾಗಿ ಆಸ್ಟ್ರೇಲಿಯಾ ವಿರುದ್ಧದ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಗೂ ಮುನ್ನ ಭಾರತ ತಂಡವು ನ್ಯೂಜಿಲೆಂಡ್ ವಿರುದ್ಧ ಕ್ಲೀನ್ ಸ್ವೀಪ್ ಜಯ ಸಾಧಿಸಿ, ಆಸ್ಟ್ರೇಲಿಯಾ ವಿರುದ್ಧ ಔಪಚಾರಿಕ ಪಂದ್ಯವಾಡಲು ಭಾರತ ನಿರ್ಧರಿಸಿದೆ. ಆದರೆ, ಭಾರತ ಹಾಗೂ ನ್ಯೂಜಿಲೆಂಡ್ ವಿರುದ್ಧದ ಮೊದಲ ಪಂದ್ಯಕ್ಕೆ ಮಳೆಯ ಕಾಟ ಶುರುವಾಗಿದೆ. ಈ ಪಂದ್ಯ ರದ್ದಾದರೆ ಆಸ್ಟ್ರೇಲಿಯಾ ವಿರುದ್ಧದ ಸರಣಿಯ ಮೂಲಕವೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಪಡೆಯಬೇಕಾಗುತ್ತದೆ.
ವಿಶ್ವ ಟೆಸ್ಟ್ ಚಾಂಪಿಯನ್ ಫೈನಲ್ ಫೈಟ್ ಗಾಗಿ ಭಾರತ ತಂಡದೊಂದಿಗೆ ಆಸ್ಟ್ರೇಲಿಯಾ, ಶ್ರೀಲಂಕಾ ತಂಡಗಳ ಮಧ್ಯೆ ಬಿಗ್ ಫೈಟ್ ನಡೆಯುತ್ತಿದೆ. ಆಸ್ಟ್ರೇಲಿಯಾ ತಂಡ ಮುಂದಿನ 7 ಟೆಸ್ಟ್ ಪಂದ್ಯಗಳಲ್ಲಿ 4 ರಲ್ಲಿ ಜಯ ಸಾಧಿಸಬೇಕಿದೆ. ಆಸ್ಟ್ರೇಲಿಯಾ ತಂಡದ ಮುಂದಿನ ಎದುರಾಳಿ ಭಾರತ ಮತ್ತು ಶ್ರೀಲಂಕಾ ಆಗಿದೆ.
ಆಸ್ಟ್ರೇಲಿಯಾ ಶ್ರೀಲಂಕಾ ವಿರುದ್ಧ 2 ಟೆಸ್ಟ್ ಪಂದ್ಯಗಳನ್ನಾಡಲಿದ್ದು, ನಂತರ ಭಾರತದ ವಿರುದ್ಧ 5 ಪಂದ್ಯ ಆಡಬೇಕಿದೆ. ಆಸ್ಟ್ರೇಲಿಯಾ ತಂಡವು ಲಂಕಾ ವಿರುದ್ಧ 2 ಪಂದ್ಯ ಗೆದ್ದರಹೂ ಆಸ್ಟ್ರೇಲಿಯಾ ನೇರವಾಗಿ ಫೈನಲ್ ತಲುಪಲು ಭಾರತದ ವಿರುದ್ಧ 2 ಪಂದ್ಯ ಗೆಲ್ಲಬೇಕಿದೆ.
ಶ್ರೀಲಂಕಾ ತಂಡವು ಮುಂದಿನ ನಾಲ್ಕು ಪಂದ್ಯಗಳಲ್ಲಿ ಮೂರರಲ್ಲಿ ಜಯ ಸಾಧಿಸಿದರೆ, ಫೈನಲ್ ಪ್ರವೇಶಿಸಬಹುದು. ಆಸ್ಟ್ರೇಲಿಯಾ ವಿರುದ್ಧ 2 ಮ್ಯಾಚ್ನಲ್ಲಿ ಗೆದ್ದ ಬಳಿಕ, ಸೌತ್ ಆಫ್ರಿಕಾ ವಿರುದ್ಧದ ಎರಡು ಪಂದ್ಯಗಳ ಸರಣಿಯನ್ನು ಗೆಲ್ಲಲೇಬೇಕಿದೆ.
ಅಲ್ಲದೇ, ಆಸ್ಟ್ರೇಲಿಯಾ ವಿರುದ್ಧ ಭಾರತ ತಂಡ ಸರಣಿ ಗೆದ್ದರೂ ಶ್ರೀಲಂಕಾಗೆ ಲಾಭವಿದೆ. ಪಾಕಿಸ್ತಾನ್ ವಿರುದ್ಧದ 2 ಪಂದ್ಯಗಳ ಸರಣಿಯನ್ನು ಹಾಗೂ ನ್ಯೂಜಿಲೆಂಡ್ ವಿರುದ್ಧದ 3 ಪಂದ್ಯಗಳನ್ನು ಗೆದ್ದುಕೊಂಡರೆ ಇಂಗ್ಲೆಂಡ್ ತಂಡವು ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ನ ಅಂಕ ಪಟ್ಟಿಯಲ್ಲಿ 2ನೇ ಸ್ಥಾನಕ್ಕೆ ಏರುವ ಸಾಧ್ಯತೆಯೂ ಇದೆ.
ಹೀಗಾಗಿ ಇಂಗ್ಲೆಂಡ್ ಪಾಲಿಗೆ ಭಾರತ ಹಾಗೂ ಆಸ್ಟ್ರೇಲಿಯಾ ವಿರುದ್ಧ ಸರಣಿ ನಿರ್ಣಾಯಕವಾಗಿದೆ. ಭಾರತ ತಂಡವು ಆಸ್ಟ್ರೇಲಿಯಾವನ್ನು 4-0 ಅಥವಾ 5-0 ಅಂತರದಿಂದ ಸೋಲಿಸಿದರೆ ಇಂಗ್ಲೆಂಡ್ ತಂಡಕ್ಕೆ ಫೈನಲ್ ತಲುಪುವ ಅವಕಾಶ ಸಿಗಬಹುದು.