ಬೆಂಗಳೂರು: ಎರಡು ಪ್ರತ್ಯೇಕ ಪ್ರಕರಣಗಳಲ್ಲಿ ಯುವಕ ಹಾಗೂ ಯುವತಿ ಹೃದಯಾಘಾತಕ್ಕೆ ಬಲಿಯಾಗಿರುವ ಘಟನೆ ನಡೆದಿದೆ.
ಹಾಸನ (Hassan) ಜಿಲ್ಲೆಯ ಹೊಳೆನರಸೀಪುರ ಪಟ್ಟಣದ ಮಡಿವಾಳ ಬಡಾವಣೆಯ ಯುವತಿ ಸಂಧ್ಯಾ (19) ಹಾಗೂ ಅರಕಲಗೂಡು ತಾಲೂಕಿನ ಕಾಡನೂರು ಗ್ರಾಮದ ಯುವಕ ಅಭಿಷೇಕ್ ಹೃದಯಾಘಾತಕ್ಕೆ (Heart Attack) ಬಲಿಯಾಗಿರುವ ದುರ್ದೈವಿಗಳು. ಸಂಧ್ಯಾ ಬಾತ್ ರೂಮ್ ನಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದರೆ, ಕ್ಯಾಬ್ ಚಾಲಕನಾಗಿದ್ದ ಅಭಿಷೇಕ್, ಬೆಂಗಳೂರಿನಲ್ಲಿ ನಿಂತಲ್ಲೇ ಏಕಾಏಕಿಯಾಗಿ ಕುಸಿದು ಬಿದ್ದು ಸಾವನ್ನಪ್ಪಿದ್ದಾನೆ.