ಶಿರಸಿ: ಮದುವೆ ಆಗಿಲ್ಲ ಎಂಬ ಕಾರಣಕ್ಕೆ ಮಾನಸಿಕ ಖಿನ್ನತೆಗೆ ಒಳಗಾದ ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ಇಲ್ಲಿನ ಕಸ್ತೂರಬಾನಗರದ ಇಬ್ರಾಹಿಂ ಬಾಷಾಸಾಬ ಮಲ್ಲಕ್ಕನವರ(25) ಆತ್ಮಹತ್ಯೆಗೆ ಶರಣಾದ ವ್ಯಕ್ತಿ. ಈ ವ್ಯಕ್ತಿ ವಿವಾಹಿತೆಯೊಬ್ಬಳನ್ನು ಪ್ರೀತಿಸುತ್ತಿದ್ದ. ಅವಳಿಂದ ಅವಳ ಪತಿಗೆ ವಿಚ್ಛೇದನ ಕೊಡಿಸಿ ನಂತರ ಈತ ಮದುವೆಯಾಗಲು ನಿರ್ಧರಿಸಿದ್ದ. ಆದರೆ, ಮಹಿಳೆಗೆ ಮಾತ್ರ ವಿಚ್ಛೇದನ ಸಿಗುವುದು ವಿಳಂಬವಾಗುತ್ತಿತ್ತು. ಇದನ್ನೇ ಮನಸ್ಸಿಗೆ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ ಎನ್ನಲಾಗಿದೆ.
ಮಾನಸಿಕವಾಗಿ ಕೊರಗಿ ತಾನು ಮಲಗುವ ರೂಮ್ ನಲ್ಲಿ ನೇಣಿಗೆ ಶರಣಾಗಿದ್ದಾನೆ. ಕೂಡಲೇ ಇದನ್ನು ಗಮನಿಸಿದ ಕುಟುಂಬಸ್ಥರು ಆತನನ್ನು ರಕ್ಷಿಸಿ ಆಸ್ಪತ್ರೆಗೆ ದಾಖಲಾಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಸಾಗಿಸುವ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾನೆ. ಸದ್ಯ ಆತನ ತಾಯಿ ಹೊಸ ಮಾರುಕಟ್ಟೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.