ಬೆಂಗಳೂರು : ನಗರದ ಪ್ರಸಿದ್ದ ಉದ್ಯಾನವನ ‘ಕಬ್ಬನ್ ಪಾರ್ಕ್‘ನಲ್ಲಿ ವ್ಯಕ್ತಿಯೋರ್ವ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಳಕಿಗೆ ಬಂದಿದೆ.
ಮೃತ ವ್ಯಕ್ತಿಯನ್ನು ಪಶ್ಚಿಮ ಬಂಗಾಳದ ಸುರೇಶ್ ಎಂದ ಗುರುತಿಸಲಾಗಿದೆ. ಈತ ಎಸ್‌ಪಿ ರೋಡ್‌ನ ಮೊಬೈಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಎಂದು ತಿಳಿದುಬಂದಿದೆ.
ಇಂದು ಬೆಳಗ್ಗೆ ಕಬ್ಬನ್ ಪಾರ್ಕ್‌ನಲ್ಲಿರುವ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸುರೇಶ್ ಶವ ಪತ್ತೆಯಾಗಿದೆ. ಯಾವ ಕಾರಣಕ್ಕೆ ಸುರೇಶ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಕಾರಣ ಇನ್ನೂ ತಿಳಿದುಬಂದಿಲ್ಲ.
ಸದ್ಯ ಘಟನಾ ಸ್ಥಳಕ್ಕೆ ಕಬ್ಬನ್ ಪಾರ್ಕ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಘಟನಾ ಸಂಬಂಧ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ : ಕೆಪಿಸಿಎಲ್‌ನಲ್ಲಿ 233 ಹುದ್ದೆಗಳಿಗೆ ನೇಮಕಾತಿ ಆದೇಶ ವಿತರಿಸಿ, ಸ್ಥಳ ನಿಯುಕ್ತಿ : ಗೌರವ್ ಗುಪ್ತಾ



















