ಚಾಮರಾಜನಗರ : ಜಿಲ್ಲೆಯ ಯಳಂದೂರು ತಾಲೂಕಿನ ಕಂದಹಳ್ಳಿ ಬಳಿ ಕಾರು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮೂವರು ಗಾಯಗೊಂಡ ಘಟನೆ ನಡೆದಿದೆ.
ಮೃತರನ್ನು ಯಳಂದೂರು ಪಟ್ಟಣದ ಪ್ರಸಾದ್ (31) ಎಂದು ಗುರುತಿಸಲಾಗಿದೆ. ಮಾಹಿತಿಯ ಪ್ರಕಾರ, ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಕಾರು ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಬಲವಾಗಿ ಡಿಕ್ಕಿ ಹೊಡೆದಿದೆ. ಈ ವೇಳೆ ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಗಾಯಗೊಂಡಿದ್ದಾರೆ.
ಘಟನೆಯಲ್ಲಿ ಗಾಯಗೊಂಡಿರುವ ಸುರೇಶ್, ಶಶಿ ಮತ್ತು ಚೇತನ್ ಅವರನ್ನು ತಕ್ಷಣವೇ ಚಾಮರಾಜನಗರದ ಸಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಅಪಘಾತದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳೀಯರು ರಕ್ಷಣಾ ಕಾರ್ಯದಲ್ಲಿ ಸಹಕರಿಸಿದ್ದಾರೆ. ಈ ಕುರಿತು ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : ಅಕ್ಕ, ತಂದೆಯನ್ನು ನಿಂದಿಸಿದ್ದಕ್ಕೆ ಸ್ನೇಹಿತನನ್ನೇ ಹತ್ಯೆಗೈದ ಪಾಪಿ!



















