ತುಮಕೂರು : ಚಲಿಸುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ನತ್ತ ಏಕಾಏಕಿ ಯುವಕನೊಬ್ಬ ಹಾರಿದ್ದು, ತಲೆ ಮೇಲೆ ಬಸ್ ಚಕ್ರ ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಕುಣಿಗಲ್ ಪಟ್ಟಣದ ಆಗ್ರಹಾರದ ಬಳಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.
ಜ.23ರ ರಾತ್ರಿ 12:40ರ ಸುಮಾರಿಗೆ ನಡೆದ ಈ ಘಟನೆಯು ಸಿಸಿಟಿವಿಯಲ್ಲಿ ಸೆರೆಯಾಗಿದೆ. ಮೃತಪಟ್ಟ ವ್ಯಕ್ತಿ ಕುಣಿಗಲ್ ಪಟ್ಟಣದ ನಿವಾಸಿ ತಿಮ್ಮೆಗೌಡ ಎಂದು ತಿಳಿದುಬಂದಿದೆ. ಈ ಪ್ರಕರಣ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
ಪೊಲೀಸರ ಪ್ರಾಥಮಿಕ ತನಿಖೆ ಪ್ರಕಾರ, ಕೌಟುಂಬಿಕ ಕಲಹಕ್ಕೆ ಬೇಸತ್ತು ಬಸ್‌ಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಇದನ್ನೂ ಓದಿ : ಹೊಸಕೋಟೆ | ಎಣ್ಣೆ ಪಾರ್ಟಿ ಮಾಡಿ ಸ್ನೇಹಿತನನ್ನೇ ಕೊಂದ ಹಂತಕರು



















