ಹುಬ್ಬಳ್ಳಿ : ಮಾರಕಾಸ್ತ್ರಗಳಿಂದ ಕೊಚ್ಚಿ ಯುವಕನ ಬರ್ಬರ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕಲಘಟಗಿ ತಾಲೂಕಿನ ಹುಣಸಿಕಟ್ಟಿ ಗ್ರಾಮದಲ್ಲಿ ನಡೆದಿದೆ.
ವಿಠ್ಠಲ ಕೊರಾಡೆ(29) ಕೊಲೆಯಾದ ಯುವಕ. ಈತನು ಮೂಲತಃ ಹುಬ್ಬಳ್ಳಿ ತಾಲೂಕಿನ ರಾಮನಕೊಪ್ಪದ ಗ್ರಾಮದ ನಿವಾಸಿಯಾಗಿದ್ದಾನೆ. ತನ್ನ ಪತ್ನಿಯ ಮನೆಗೆ ಬಂದಿದ್ದು, ಮರಳುವಾಗ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಬಿಸಾಡಿದ್ದಾರೆ. ಸದ್ಯ ಸ್ಥಳಕ್ಕೆ ಕಲಘಟಗಿ ಪೊಲೀಸರು ಭೇಟಿ ಮಾಡಿದ್ದು, ಪರಿಶೀಲನೆ ಮಾಡುತ್ತಿದ್ದಾರೆ.
ಇದನ್ನೂ ಓದಿ : ಕೋಲಾರ | ಥಿನ್ನರ್ ದ್ರವ ಸೇವಿಸಿ 3 ವರ್ಷದ ಮಗು ಸಾವು



















