ನೆಲಮಂಗಲ: ಪಾಪಿಯೊಬ್ಬ ಪ್ರೀತಿಸಿ ಕೈಕೊಟ್ಟ ಯುವತಿಯ ಖಾಸಗಿ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿರುವ ಘಟನೆ ನಡೆದಿದೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲದ ಮಂಜುನಾಥ ನಗರದಲ್ಲಿ ನಡೆದಿದೆ. ಯುವತಿ ಜೊತೆಗಿದ್ದ ಖಾಸಗಿ ಫೋಟೋ ಸಾಮಾಜಿಕ ಜಾಲತಾಣದಲ್ಲಿ ಹಾಕಿದ್ದಾನೆ. ದರ್ಶನ್ ಎಂಬ ಪಾಪಿ ಈ ರೀತಿ ವಿಕೃತಿ ಮೆರೆದಿದ್ದಾನೆ. ಸದ್ಯ ಬಾಗಲಗುಂಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಈತ ಬಾಗಲಗುಂಟೆಯ ಫರ್ನಿಚರ್ ಅಂಗಡಿಯಲ್ಲಿ ಯುವತಿ ಸೇಲ್ಸ್ ಕೆಲಸ ಮಾಡುತ್ತಿದ್ದಳು. ನನ್ನ ಪ್ರೀತಿ ಮಾಡದಿದ್ದರೆ ನೀನ್ನ ಜೀವನ ಹಾಳು ಮಾಡುತ್ತೇನೆಂದು ಆರೋಪಿ ದರ್ಶನ್ ಬೆದರಿಕೆ ಕೂಡ ಹಾಕಿದ್ದ ಎನ್ನಲಾಗಿದೆ. ವಾಟ್ಸಾಪ್ ಸ್ಟೇಟಸ್ ಹಾಗೂ ಇನ್ಸ್ಟಾಗ್ರಾಮ್ ಸ್ಟೋರಿನಲ್ಲಿ ಖಾಸಗಿ ಫೋಟೋ ಹಾಕಿ ಮಾನಹಾನಿ ಮತ್ತು ತೇಜೋವಧೆಗೆ ಮುಂದಾಗಿದ್ದ ಎನ್ನಲಾಗಿದೆ. ಈ ಕುರಿತು ದೂರು ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಗಾಗಿ ಬಲೆ ಬೀಸಿದ್ದಾರೆ.