ದಾವಣಗೆರೆ: ಅನಾರೋಗ್ಯದಿಂದ ಬೇಸತ್ತ ಯುವಕನೊಬ್ಬ ನೇಣಿಗೆ ಶರಣಾದ ಘಟನೆ ದಾವಣಗೆರೆ ಜಿಲ್ಲೆಯ ಹರಿಹರ ತಾಲೂಕಿನ ಗುಡ್ಡದ ತುಮ್ಮಿನಕಟ್ಟೆ ಗ್ರಾಮದಲ್ಲಿ ನಡೆದಿದೆ.
ಮಾರುತಿ (17) ಮೃತ ದುರ್ದೈವಿ ಎಂದು ಗುರುತಿಸಲಾಗಿದೆ. ಕಳೆದ ಎರಡು ಮೂರು ವರ್ಷಗಳಿಂದ ಗಂಭೀರ ಅನಾರೋಗ್ಯದಿಂದ ಬಳಲುತ್ತಿದ್ದ ಮಾರುತಿ, ದಿನನಿತ್ಯದ ನೋವುಗಳಿಂದ ಮಾನಸಿಕವಾಗಿ ಕುಗ್ಗಿದ್ದನು ಎಂದು ತಿಳಿದುಬಂದಿದೆ.
ಇದೇ ಕಾರಣದಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಇಂದು ಮುಂಜಾನೆ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಮೂಲಗಳು ತಿಳಿಸಿವೆ. ಘಟನೆಯ ಕುರಿತು ಮಲೆಬೆನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ಕೈಗೊಂಡಿದ್ದಾರೆ.
Get smarter resp



















