ಮಂಗಳೂರು: ಮದುವೆಯಾಗುವುದಾಗಿ ನಂಬಿಸಿ ಯುವಕ ವಂಚಿಸಿದ್ದರಿಂದಾಗಿ ಯುವತಿ ಮನನೊಂದು ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ನಡೆದಿದೆ.
ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಿತ್ತಬಾಗಿಲು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಯುವತಿಗೆ ತನ್ನ ಸಂಬಂಧಿ ಚಾರ್ಮಾಡಿ ಗ್ರಾಮದ ಪ್ರವೀಣ್ ಗೌಡ ಎಂಬಾತನನ್ನು ಪ್ರೀತಿಸಿದ್ದರು. ಪ್ರವೀಣ ಬೆಂಗಳೂರಿನಲ್ಲಿ ಮೆಕ್ಯಾನಿಕ್ ಆಗಿದ್ದು, ಊರಿಗೆ ಬಂದಾಗ ಯುವತಿಯನ್ನು ಭೇಟಿಯಾಗುತ್ತಿದ್ದ. ಇಬ್ಬರ ಮಧ್ಯೆ ದೈಹಿಕ ಸಂಪರ್ಕ ಕೂಡ ಬೆಳೆದಿತ್ತು ಎನ್ನಲಾಗಿದೆ.
ಆದರೆ, ಸದ್ಯ ಮದುವೆ ಬೇಡ ಮುಂದೆ ಮಾಡೋಣ ಎಂದಿದ್ದರು. ಆಗ ಪ್ರವೀಣ್ ಬ್ರೇಕಪ್ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಇದರಿಂದಾಗಿ ಯುವತಿ ಮನನೊಂದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನಲಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.


















