ಚಿಕ್ಕಬಳ್ಳಾಪುರ : ಜಿಲ್ಲೆಯ ಪೆರೇಸಂದ್ರ ಗ್ರಾಮದಲ್ಲಿ 18 ವರ್ಷದ ಯುವತಿಯೊಬ್ಬಳು ಆತ್ಮಹತ್ಯೆಗೆ ಶರಣಾಗಿರುವ ದುರ್ಘಟನೆ ಸಂಭವಿಸಿದೆ. ಮನೆಯಲ್ಲಿ ಅತ್ತೆ ಅಡುಗೆ ಮಾಡುವಂತೆ ಬುದ್ಧಿವಾದ ಹೇಳಿದ್ದಕ್ಕೆ ಮನನೊಂದು ಈ ಕಠಿಣ ನಿರ್ಧಾರ ತೆಗೆದುಕೊಂಡಿದ್ದಾಳೆ ಎಂದು ತಿಳಿದುಬಂದಿದೆ.
ಅತ್ತೆ ಮನೆಯಲ್ಲಿ ಇರುವಾಗ ಸ್ವಲ್ಪ ಕೆಲಸ ಮಾಡಬೇಕಮ್ಮ, ನನಗೂ ಸ್ವಲ್ಪ ಸಹಾಯ ಆಗುತ್ತದೆ. ಸುಮ್ಮನೆ ಇರುವ ಬದಲು ಅಡುಗೆ ಮಾಡುವುದನ್ನು ಕಲಿ ಎಂದು ಹೇಳಿದ್ದರು. ಆದ್ರೆ ಅತ್ತೆ ಹೇಳಿದ ರೀತಿ ಇಲ್ಲ ಎಂದು ಶ್ರುತಿ ಅಪಾರ್ಥ ಮಾಡಿಕೊಂಡು ತೀವ್ರವಾಗಿ ಮನನೊಂದುಕೊಂಡಿದ್ದಾಳೆ ಎನ್ನಲಾಗಿದೆ.
ಅತ್ತೆಯ ಮಾತನ್ನು ತುಂಬಾ ಮನಸ್ಸಿಗೆ ತೆಗೆದುಕೊಂಡು, ಮನೆಯಲ್ಲಿದ್ದ ವಿಷಸೇವನೆ ಮಾಡಿದ್ದಾಳೆ. ತಕ್ಷಣ ಶೃತಿಯನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೇ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾಳೆ. ಈ ಘಟನೆಗೆ ಸಂಬಂಧಿಸಿದಂತೆ ಪೆರೇಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಇದನ್ನೂ ಓದಿ : 15 ವರ್ಷಗಳ ಹಿಂದೆ ಸಕಲೇಶಪುರ ಜೈಲಿಂದ ತಪ್ಪಿಸಿಕೊಂಡಿದ್ದ ಆರೋಪಿ ಗೋವಾದಲ್ಲಿ ಅರೆಸ್ಟ್!


















