ಬೆಂಗಳೂರು: ಮಹಡಿ ಮೇಲಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಘಟನೆ ನಡೆದಿದೆ.
ಅಪಾರ್ಟ್ಮೆಂಟ್ ನ ಎರಡನೇ ಮಹಡಿಯಿಂದ ಬಿದ್ದು ಯುವತಿ ಸಾವನ್ನಪ್ಪಿರುವ ಈ ಘಟನೆ ಚಂದ್ರಾ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.
ಸಾವನ್ನಪ್ಪಿದ ಯುವತಿಯನ್ನು ಆರ್ ಟಿಓ ಜಂಟಿ ಆಯುಕ್ತೆ ಶೋಭಾ ಅವರ ಪುತ್ರಿ ಎಂದು ಗುರುತಿಸಲಾಗಿದೆ. ಆತ್ಮಹತ್ಯೆಯೋ? ಅಥವಾ ಆಕಸ್ಮಿಕ ಸಾವೋ? ಎಂಬುವುದು ತಿಳಿದು ಬಂದಿಲ್ಲ. ಸ್ಥಳಕ್ಕೆ ಪೊಲೀಸರು ಬಂದು ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಚಂದ್ರ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


















