ಮಂಗಳೂರು: ಇನ್ಸ್ಟಾಗ್ರಾಂನಲ್ಲಿ (Instagram) ಬೇರೆಯವರಿಗೆ ಲೈಕ್ ಕೊಟ್ಟಿದ್ದಕ್ಕೆ ನಿಶ್ಚಿತಾರ್ಥ (Engagement) ಮಾಡಿಕೊಂಡಿದ್ದ ಯುವತಿ ಕೋಪಗೊಂಡಿದ್ದಾಳೆಂದು ಯುವಕ ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ.
ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಬಂಟ್ವಾಳದ (Bantwal) ಪೂಂಜಾಲಕಟ್ಟೆಯ ಕುಕ್ಕಿಪ್ಪಾಡಿ ಎಂಬಲ್ಲಿ ಈ ಘಟನೆ ನಡೆದಿದೆ. ಚೇತನ್ (25) ಆತ್ಮಹತ್ಯೆ ಮಾಡಿಕೊಂಡ ಯುವಕ. ಚೇತನ್‌ಗೆ ಕುಂದಾಪುರದ ಚೈತನ್ಯ ಎಂಬ ಯುವತಿ ಇನ್ಸ್ಟಾಗ್ರಾಂನಲ್ಲಿ ಪರಿಚಯವಾಗಿದ್ದಳು. ಆನಂತರ ಇಬ್ಬರೂ ಪರಸ್ಪರ ಒಪ್ಪಿ, ತಮ್ಮ ಕುಟುಂಬಸ್ಥರನ್ನೂ ಒಪ್ಪಿಸಿ ನಿಶ್ಚಿತಾರ್ಥ ಮಾಡಿಕೊಂಡಿದ್ದರು.
ಆದರೆ, ಚೇತನ್ ಇತ್ತೀಚೆಗೆ ಪರಿಚಯದ ಯುವತಿಗೆ ಇನ್ಸ್ಟಾಗ್ರಾಂನಲ್ಲಿ ಲೈಕ್ ನೀಡಿದ್ದಾನೆ. ಇದಕ್ಕೆ ನಿಶ್ಚಿತಾರ್ಥ ಮಾಡಿಕೊಂಡಿರುವ ಯುವತಿ ಆಕ್ಷೇಪ ವ್ಯಕ್ತಪಡಿಸಿದ್ದಾಳೆ. ಈ ವಿಷಯವಾಗಿ ಇಬ್ಬರ ಮಧ್ಯೆ ಜಗಳವಾಗಿದೆ. ಇದರಿಂದಾಗಿ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಈ ಕುರಿತು ಪೂಂಜಾಲಕಟ್ಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.