ಹಾಸನ: ಹೊಸ ವರ್ಷದ ಸಂಭ್ರಮದಲ್ಲಿದ್ದ ವ್ಯಕ್ತಿಗೆ ಪ್ರಿಯತಮೆ ಚಾಕುವಿನಿಂದ ಏಕಾಏಕಿ ದಾಳಿ ಮಾಡಿರುವ ಘಟನೆ ನಡೆದಿದೆ.
ಈ ಘಟನೆ ನಗರದ (Hassan) ಬಿ.ಎಂ ರಸ್ತೆಯಲ್ಲಿರುವ ಖಾಸಗಿ ಹೋಟೆಲ್ ಹತ್ತಿರ ನಡೆದಿದೆ. ಚಾಕು ಇರಿತಕ್ಕೊಳಗಾದ ಯುವಕನನ್ನು ಎ.ಗುಡುಗನಹಳ್ಳಿ ಗ್ರಾಮದ ಮನುಕುಮಾರ್ (25) ಎಂದು ಗುರುತಿಸಲಾಗಿದೆ. ಚಾಕು ಇರಿದ ಯುವತಿಯನ್ನು ಭವಾನಿ ಎನ್ನಲಾಗಿದೆ.
ಇವರಿಬ್ಬರೂ ಒಂದೇ ಗ್ರಾಮದವರು. ಮನುಕುಮಾರ್ ಹಾಗೂ ಭವಾನಿ ಜೊತೆಗೆ ವ್ಯಾಸಂಗ ಮಾಡುತ್ತಿದ್ದರು. ಅಲ್ಲದೇ, ಇಬ್ಬರೂ ಪರಸ್ಪರ ಪ್ರೀತಿಸುತ್ತಿದ್ದರು. ಆದರೆ, ಕೆಲವು ದಿನಗಳಿಂದ ಇಬ್ಬರೂ ದುರವಾಗಿದ್ದರು ಎನ್ನಲಾಗಿದೆ.
ಹೊಸ ವರ್ಷಾಚರಣೆಯ ಹಿನ್ನೆಲೆಯಲ್ಲಿ ಮಂಗಳವಾರ ಸ್ನೇಹಿತರ ಜೊತೆ ಖಾಸಗಿ ಹೋಟೆಲ್ ಗೆ ಮನುಕುಮಾರ್ ಬಂದಿದ್ದ.
ಈ ಸಂದರ್ಭದಲ್ಲಿ ಪದೇ ಪದೇ ಮನುಕುಮಾರ್ ಗೆ ಯುವತಿ ಕರೆ ಮಾಡಿದ್ದಳು. ನಂತರ ರಾತ್ರಿ 12:30ರ ವೇಳೆಗೆ ಹೋಟೆಲ್ ಬಳಿ ಬಂದ ಭವಾನಿ, ಒಳಗೆ ಪ್ರವೇಶಿಸಿ ಮನುಕುಮಾರ್ ಗೆ ಚಾಕುವಿನಿಂದ ಇರಿದಿದ್ದಾಳೆ. ಘಟನೆಯಲ್ಲಿ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೆ.ಆರ್. ಪುರಂ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.