ಮೈಸೂರು: ಇತ್ತೀಚೆಗೆ ಸಾಮಾಜಿಕ ಜಾಲತಾಣದ ಹುಚ್ಚು ಯುವಪೀಳಿಗೆಯಲ್ಲಿ ಹೆಚ್ಚಾಗುತ್ತಿದ್ದು, ಅಪಾಯವನ್ನೂ ಲೆಕ್ಕಿಸದೆ ಸ್ಟಂಟ್ ಮಾಡಿ ಫಜೀತಿಗೆ ಸಿಲುಕುತ್ತಿದ್ದಾರೆ. ವ್ಹೀಲಿಂಗ್ ಮಾಡುವುದು ಅಪರಾಧವಾದರೂ ಕೆಲವು ಕಿಡಿಗೇಡಿಗಳು ಮಾತ್ರ ಸೋಷಿಯಲ್ ಮೀಡಿಯಾ ಹುಚ್ಚಿಗಾಗಿ ಅದರ ಹಿಂದೆ ಬಿದ್ದಿದ್ದಾರೆ.
ಈಗ ಕ್ರೇಜ್ ಗಾಗಿ ಬೈಕ್ ವ್ಹೀಲಿಂಗ್ ಮಾಡಿ ಯುವಕನೊಬ್ಬ ಪೊಲೀಸರ ಅತಿಥಿಯಾಗಿದ್ದಾನೆ. ಬೈಕ್ ವ್ಹೀಲಿಂಗ್ ಮಾಡಿ ಇನ್ ಸ್ಟಾಗ್ರಾಂನಲ್ಲಿ ಅಪ್ಲೋಡ್ ಮಾಡಿದ್ದಾನೆ. ಈ ಪೋಸ್ಟ್ ನೋಡಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸದ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಹುಣಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಬೈಕ್ ವಶಕ್ಕೆ ಪಡೆದಿದ್ದಾರೆ.
ಕುರುಬರ ಹೊಸಹಳ್ಳಿ ರಸ್ತೆಯಲ್ಲಿ ಯುವಕ ಬೈಕ್ ವ್ಹೀಲಿಂಗ್ ಮಾಡಿ, ಸಿಕ್ಕಿ ಬಿದ್ದಿದ್ದಾನೆ. ಇಮ್ರಾನ್ ಷರೀಫ್ (32) ಪೊಲೀಸರ ಅತಿಥಿಯಾಗಿರುವ ಯುವಕ ಎನ್ನಲಾಗಿದೆ.